ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 20 ಆಗಸ್ಟ್ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಹಳೆಯ ಮಿತ್ರರನ್ನು ಭೇಟಿ ಮಾಡಲಿದ್ದೀರಿ. ಸಂಗಾತಿಯ ಕೆಲವೊಂದು ಮಾತುಗಳು ಅಸಮಾಧಾನಕ್ಕೆ ಕಾರಣವಾದೀತು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗುವುದು. ಹಿರಿಯರಿಗೆ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ತೃಪ್ತಿ ಸಿಗುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ.

ಮಿಥುನ: ಹೆಚ್ಚಿನ ಹಣ ಗಳಿಕೆಗೆ ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಹಳೆಯ ವಸ್ತುಗಳನ್ನು ಕೊಟ್ಟು ಹೊಸ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ವಾಹನ ರಿಪೇರಿ ಕೆಲಸಗಳಿಗೆ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಸಿಂಹ: ಕಾರ್ಯರಂಗದಲ್ಲಿ ನೀವೇ ಮೇಲುಗೈ ಸಾಧಿಸಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ದಾಂಪತ್ಯದಲ್ಲಿ ಸುಖ, ಸಮೃದ್ಧಿಯಿರುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಕನ್ಯಾ: ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ. ಗೃಹ, ವಾಹನಾದಿ ಖರೀದಿಯಿಂದ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಧನು: ದೇಹಾರೋಗ್ಯದಲ್ಲಿ ಹಳೆಯ ಸಮಸ್ಯೆಗಳು ಮತ್ತೆ ಪ್ರತ್ಯಕ್ಷವಾದೀತು. ಬಂಧು ಮಿತ್ರರನ್ನು ಭೇಟಿ ಮಾಡಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಕರ: ಇಷ್ಟ ವ್ಯಕ್ತಿಗಳನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗುವುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಮಕ್ಕಳ ಅಧ್ಯಯನದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಅನಿವಾರ್ಯ ಕಾರಣಗಳಿಗೆ ಅತಿಯಾದ ಓಡಾಟ ನಡೆಸಬೇಕಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮಕ್ಕಳ ಭವಿಷ್ಯದ ಬಗ್ಗೆ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಚರ್ಚಿಸಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments