ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 21 ಆಗಸ್ಟ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಬಹು ದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ‍್ಳಲಿದ್ದೀರಿ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ.

ವೃಷಭ: ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ದೂರದ ವ್ಯವಹಾರಗಳಿಂದ ಲಾಭ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಆಸ್ತಿ ಖರೀದಿ, ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ಲಭ್ಯವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಲಾಭ ಕಂಡುಬರಲಿದೆ. ಗೃಹೋಪಯೋಗಿ  ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ತಾಳ್ಮೆಯಿರಲಿ.

ಸಿಂಹ: ದಿನವಿಡೀ ಕೆಲಸ ಕಾರ್ಯಗಳಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದಂಪತಿಗಳ ನಡುವೆ ಸಾಮರಸ್ಯದ ಕೊರತೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಸಹೋದರ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳು ನಿವಾರಣೆಯಾಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ.

ತುಲಾ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ವ್ಯಾಪಾರಿಗಳಿಗೆ ಹಣಕಾಸಿನ ಮುಗ್ಗಟ್ಟುಗಳು ಕಂಡುಬಂದೀತು. ಕೌಟುಂಬಿಕವಾಗಿ ಪರಸ್ಪರ ಸುಖ, ಸಮೃದ್ಧಿಯಿರಲಿದೆ. ತಾಳ್ಮೆಯಿರಲಿ.

ಧನು: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಹಿಂದೆ ಮಾಡಿದ ಸಾಲಗಳನ್ನು ತೀರಿಸಲಿದ್ದೀರಿ. ನೂತನ ಗೃಹ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೂರ ಪ್ರಯಾಣ ರದ್ದಾಗಲಿದೆ.

ಮಕರ: ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಅತಿಥಿ ಸತ್ಕಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ದೇವತಾ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಸತ್ಕಾರ್ಯಗಳಿಗೆ ಧನ  ವಿನಿಯೋಗ ಮಾಡಲಿದ್ದೀರಿ. ಹಳೆಯ ಗೆಳೆಯರನ್ನು ಭೇಟಿ ಮಾಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.

ಮೀನ: ಕಾರ್ಯರಂಗದಲ್ಲಿ ತೀವ್ರ ಪೈಪೋಟಿ ಎದುರಾಗಲಿದೆ. ಆಪ್ತ ವರ್ಗದವರ ಕಷ್ಟಕ್ಕೆ ನೆರವಾಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಾಗಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments