Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 31 ಆಗಸ್ಟ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಬೇರೆಯವರ ಬಗ್ಗೆ ಅತಿಯಾಗಿ ಚಿಂತಿಸುವುದನ್ನು ಬಿಟ್ಟು ನಿಮ್ಮ ಭವಿಷ್ಯದ ದಾರಿ ನೋಡಿಕೊಳ್ಳಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಅಪರಿಚಿತರಿಂದಲೂ ಸಹಾಯ ಒದಗಿಬರಲಿದೆ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಚಿನ್ನಾಭರಣ ವ್ಯಾಪಾರಿಗಳಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ಮಂಗಲ ವಸ್ತ್ರಾಭರಣ ಖರೀದಿ ಯೋಗ. ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲ ಸಿಗುವುದು.  ಮಕ್ಕಳಿಂದ ಸಂತೋಷ ಸಿಗುವುದು.

ಕನ್ಯಾ: ನಿಮ್ಮಲ್ಲಿರುವ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕಾದೀತು. ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಗುಣವಾಗಿ ಉದ್ಯೋಗ ಸಿಗುವುದು. ಭೂಮ್ಯಾದಿ ವ್ಯವಹಾರಗಳಿಂದ ಲಾಭವಾಗುವುದು.

ತುಲಾ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಇನ್ನೊಬ್ಬರ ಹಸ್ತಕ್ಷೇಪ ಅಸಮಾಧಾನಕ್ಕೆ ಕಾರಣವಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಲಿದ್ದೀರಿ.

ವೃಶ್ಚಿಕ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಪೈಪೋಟಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಆಪ್ತರಿಂದ ನಿರೀಕ್ಷಿತ ಸಹಾಯ ಲಬ್ಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಯಾವುದೇ ವಿಚಾರವಾದರೂ ಯೋಚಿಸಿ ಮುಂದಡಿಯಿಡುವುದು ಸೂಕ್ತ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಅನುಕೂಲ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಬರಲಿದೆ. ಯೋಗ, ಧ್ಯಾನದಲ್ಲಿ ಒಲವು ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು.

ಮೀನ: ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ನೆಂಟಸ್ತಿಕೆ ಕೂಡಿಬರಲಿದೆ. ದಾಂಪತ್ಯ ಜೀವನದಲ್ಲಿ ತೃಪ್ತಿ ಕಂಡುಬರಲಿದೆ. ಅಲ್ಪಕಾಲದ ಹೂಡಿಕೆಯಿಂದ ಲಾಭ ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?