ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 9 ಜುಲೈ 2019 (08:39 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ. ಆರ್ಥಿಕವಾಗಿ ನಾನಾ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸಹೋದರರೊಂದಿಗೆ ಆಸ್ತಿ ಸಂಬಂಧವಾಗಿ ಕಿರಿ ಕಿರಿಯಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಖರ್ಚಿನ ಬಗ್ಗೆ ನಿಗಾ ಇರಲಿ.

ಮಿಥುನ: ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡುವಿರಿ. ಸಹೋದರಿಯ ವಿವಾಹ ಸಂಬಂಧ ಓಡಾಟ ನಡೆಸಬೇಕಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಧಾರ್ಮಿಕ ಕೆಲಸಗಳಿಗಾಗಿ ಧನವಿನಿಯೋಗ ಮಾಡುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಿರಿ. ವಾಹನ ಚಲಾಯಿಸುವಾಗ ಎಚ್ಚರವಿರಲಿ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ.

ಸಿಂಹ: ಸ್ವ ಉದ್ಯೋಗಿಗಳು ಅಧಿಕ ಲಾಭ ಗಳಿಸುವರು. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ಸ್ವೀಕರಿಸುವುದು ಒಳ್ಳೆಯದು. ಆಸ್ತಿ ವಿವಾದದಲ್ಲಿ ನಿಮಗೆ ಹಿನ್ನಡೆಯಾಗಬಹುದು. ತಾಳ್ಮೆಯಿಂದಿರಿ.

ಕನ್ಯಾ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಖುಷಿಯಾಗುವುದು. ದೂರ ಸಂಚಾರದಲ್ಲಿ ಕಳ್ಳತನದ ಭೀತಿಯಿದೆ. ಪ್ರೇಮಿಗಳಿಗೆ ಮನೆಯಲ್ಲಿ ಹಿರಿಯರಿಂದ ವಿರೋಧ ವ್ಯಕ್ತವಾಗಬಹುದು.

ತುಲಾ: ಹೊಸ ನಿರ್ಧಾರಗಳನ್ನು ಕೈಗೊಳ್ಳುವಾಗ ಸಂಗಾತಿಯೊಂದಿಗೆ ಸಮಾಲೋಚನೆ ನಡೆಸುವುದು ಒಳಿತು. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ತಲೆದೋರಬಹುದು. ವಾಹನ ಖರೀದಿಗೆ ಮುಂದಾಗುವಿರಿ. ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಧನು: ಹೆಚ್ಚಿನ ಧನಾರ್ಜನೆಗೆ ನಾನಾ ಮೂಲಗಳನ್ನು ಕಂಡುಕೊಳ್ಳುವಿರಿ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಬಹುದು. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಎಚ್ಚರಿಕೆಯಿಂದಿರಿ. ಅಪರಿಚಿತರನ್ನು ನಂಬಿ ವ್ಯವಹರಾ ಮಾಡಬೇಡಿ.

ಮಕರ: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಓಡಾಟ ನಡೆಸುವಿರಿ. ಹೆಚ್ಚಿನ ಶುಭ ಫಲಗಳಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಹೊಸ ವ್ಯವಹಾರಗಳಿಗೆ ಕೈ ಹಾಕುವಾಗ ಋಣಾತ್ಮಕ ಚಿಂತನೆಗಳು ಕಾಡಬಹುದು. ಆದರೆ ಆಲಸ್ಯತನದಿಂದ ಹಿಂದೇಟು ಹಾಕಬೇಡಿ. ನಿಮ್ಮ ಕೆಲಸಗಳಿಗೆ ಸಂಗಾತಿಯಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ಮೀನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಏಳಿಗೆ ಕಂಡುಬರಲಿದೆ. ಆರ್ಥಿಕವಾಗಿಯೂ ನಿಧಾನವಾಗಿ ಚೇತರಿಕೆ ಕಂಡುಬರುವುದು. ಆದರೆ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ಮುಂದಿನ ಸುದ್ದಿ
Show comments