Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಗುರುವಾರ, 14 ನವೆಂಬರ್ 2019 (08:59 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ‍್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗಲಿವೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗವನ್ನು ಕಂಡುಕೊಳ್ಳಲಿದ್ದಾರೆ. ಆಕಸ್ಮಿಕ ಧನಲಾಭವಾಗಲಿದೆ.

ವೃಷಭ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ದೈವಾನುಕೂಲದಿಂದ ಅಂದುಕೊಂಡ ಕೆಲಸಗಳನ್ನು ನೆರವೇರಿಸುವಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ನೀರಿಗಾಗಿ ಪರದಾಟ ತಪ್ಪದು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಆರ್ಥಿಕವಾಗಿ ಹೆಚ್ಚಿನ  ಅಭಿವೃದ್ಧಿ ಕಂಡುಬರಲಿದೆ. ಆದರೆ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ದೂರ ಪ್ರಯಾಣ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಕುಟುಂಬ ಸದಸ್ಯರ ಆರೋಗ್ಯ ಹದತಪ್ಪಿ ಆಸ್ಪತ್ರೆ ಸೇರುವಂತಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ಮನಸ್ಸು ಹೈರಾಣಾಗುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಸಾಮಾಜಿಕವಾಗಿ ಉತ್ತಮ ಸ್ಥಾನ ಮಾನ ನಿಮ್ಮದಾಗುವುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಮಹಿಳೆಯರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ಸರಕಾರಿ ಕೆಲಸಗಳಲ್ಲಿ ಜಯ ಪ್ರಾಪ್ತಿಯಾಗುವುದು. ತಾಳ್ಮೆಯಿರಲಿ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಹೊಸ ವ್ಯವಹಾರಗಳಿಂದ ಲಾಭ ಸಿಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಡಬೇಕು.

ವೃಶ್ಚಿಕ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ್ಯತೆಯಿದೆ. ನಾಲಿಗೆ ಚಪಲದಿಂದಾಗಿ ಆರೋಗ್ಯದಲ್ಲಿ ಏರುಪೇರಾಗಬಹುದು. ವಾಹನ ಖರೀದಿ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಮಾಡುವಿರಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು.

ಧನು: ದಾಯಾದಿಗಳೊಂದಿಗಿನ ಆಸ್ತಿ ವಿವಾದಗಳಿಗೆ ಅಂತ್ಯ ಸಿಗಲಿದೆ. ಹಿರಿಯರ ಮಧ್ಯಸ್ಥಿಕೆ ಫಲ ಕೊಡುವುದು. ಸಂಗಾತಿಯೊಂದಿಗೆ ದುಡುಕಿನ ಮಾತನಾಡಬೇಡಿ. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆಯ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಹಿನ್ನಡೆಯುಂಟಾದೀತು. ಆದರೆ ತಾಳ್ಮೆಗೆಡಬೇಡಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಮನೆ, ಆಸ್ತಿ ಖರೀದಿಗೆ ಮನಸ್ಸು ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇದ್ದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ಹೆಚ್ಚಿನ ಲಾಭ ತರುವ ವ್ಯವಹಾರ ಮಾಡಲು ಹೋಗಿ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರದಿಂದಿರಿ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ತಾಳ್ಮೆಯಿಂದಿರಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಸಹನೆ ಪರೀಕ್ಷಿಸುವಂತಹ ಅನೇಕ ಘಟನೆಗಳು ನಡೆಯಲಿವೆ. ಎಲ್ಲದಕ್ಕೂ ಮೌನವೇ ಅಸ್ತ್ರವಾಗಬೇಕು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ