Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಗುರುವಾರ, 21 ನವೆಂಬರ್ 2019 (09:00 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಇನ್ನೊಬ್ಬರಿಗೆ ಖುಷಿ ಕೊಡುವ ವಿಚಾರಗಳು ನಿಮಗೆ ಬೇಸರ ಉಂಟುಮಾಡಬಹುದು. ಕ್ಷುಲ್ಲುಕ ಕಾರಣಗಳಿಗೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.

ವೃಷಭ: ಅಧಿಕ ಲಾಭ ತಂದುಕೊಡುವ ವ್ಯವಹಾರಗಳಿಗೆ ಕೈ ಹಾಕುವಿರಿ. ಬೆನ್ನ ಹಿಂದಿರುವ ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಸಂಗಾತಿಯ ಆರೋಗ್ಯ ಏರುಪೇರಾಗಬಹುದು. ಕಾಳಜಿ ವಹಿಸಬೇಕು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಿಥುನ: ವ್ಯಾಪಾರ, ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ನೂತನ ದಂಪತಿಗಳಿಗೆ ವಿಹಾರ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.

ಕರ್ಕಟಕ: ಕುಟುಂಬ ಸದಸ್ಯರ ಆರೋಗ್ಯ ಹದತಪ್ಪಿ ಆಸ್ಪತ್ರೆ ಸೇರುವಂತಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ಮನಸ್ಸು ಹೈರಾಣಾಗುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಗೊಳ್ಳಲಿದೆ. ಕಲಾ ಪ್ರೇಮಿಗಳಿಗೆ ಖ್ಯಾತಿ ಸಿಗಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮೊದಲು ಹಿರಿಯರ ಸಲಹೆ ಪಡೆಯಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಮಾಡುವ ಯೋಗವಿದೆ. ಸಂಗಾತಿಯ ಮನದಾಸೆಯನ್ನು ಪೂರೈಸಬೇಕಾಗುತ್ತದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ನಿರ್ವಹಿಸದಿದ್ದರೆ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ.

ತುಲಾ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವರು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಅಲೆದಾಟ ತಪ್ಪದು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ವಹಿಸಬೇಕಾಗುತ್ತದೆ.

ವೃಶ್ಚಿಕ: ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ಆರ್ಥಿಕವಾಗಿ ಬರಬೇಕಾಗಿದ್ದ ಸಾಲಗಳು ಮರುಪಾವತಿಯಾಗಲಿವೆ. ಗೃಹೋಪಯೋಗಿ ವಸ್ತುಗಳಿಗೆ ಧನವಿನಿಯೋಗ ಮಾಡುವಿರಿ.

ಧನು: ನೀವು ನಂಬಿದವರೇ ನಿಮ್ಮ ಬೆನ್ನಿಗೆ ಚೂರಿ ಹಾಕುತ್ತಾರೆ. ಅತಿಯಾದ ವಿಶ್ವಾಸ ಒಳ್ಳೆಯದಲ್ಲ. ಮಾನಸಿಕವಾಗಿ ಹಲವು ರೀತಿಯ ಗೊಂದಲಗಳು ಕಾಡಲಿವೆ. ಇಷ್ಟ ಮಿತ್ರರ ಭೇಟಿ, ಭೋಜನ ಮಾಡುವಿರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ದೈವಾನುಗ್ರಹದಿಂದ ಇಂದು ನೀವು  ಕೈ ಹಿಡಿದ ಕೆಲಸಗಳು ಸುಸ್ರೂತ್ರವಾಗಿ ನಡೆಯಲಿವೆ. ಹೆಚ್ಚಿನ ಧನಾರ್ಜನೆಗೆ ನಾನಾ ರೀತಿಯ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಕೌಟುಂಬಿಕವಾಗಿ ಹೆಂಡತಿ-ಮಕ್ಕಳೊಂದಿಗೆ ಸುಂದರ ಕ್ಷಣ ಕಳೆಯುವಿರಿ. ದೇವತಾ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ.

ಕುಂಭ: ಚೀಟಿ ವ್ಯವಹಾರಗಳಲ್ಲಿ ನಿಮಗೆ ಅನುಕೂಲವಾಗುವುದು. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ತೋರಿಬರಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡುವುದು. ಉದರ ಸಂಬಂಧೀ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಹೊಸ ವಾಹನ ಖರೀದಿಗೆ ಸುಯೋಗ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದಾಯಾದಿ ಕಲಹಗಳು ಪರಿಹಾರವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣುಮಕ್ಕಳು ಮನೆಯಲ್ಲಿ ಮಾಡುವ ಈ ತಪ್ಪುಗಳಿಂದ ಮನೆಯಲ್ಲಿ ದಾರಿದ್ರ್ಯ ಆವರಿಸುತ್ತದೆ