ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 4 ಮೇ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯರಂಗದಲ್ಲಿ ನಿಮಗೆ ಪ್ರತಿಕೂಲವಾದ ಫಲಿತಾಂಶ ಬರುವುದರಿಂದ ಮನಸ್ಸಿಗೆ ಬೇಸರವಾಗಲಿದೆ. ಕಠಿಣ ಸಮಯ ಎದುರಿಸಬೇಕಾಗುತ್ತದೆ. ಸಾಂಸಾರಿಕವಾಗಿ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಲಿದ್ದೀರಿ. ನಿಮ್ಮ ದುಡುಕು, ಮಾತು ವರ್ತನೆಗೆ ಕಡಿವಾಣ ಹಾಕುವುದು ಒಳಿತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಿಥುನ: ಭವಿಷ್ಯದ ಯೋಜನೆಗಳನ್ನು ಸಿದ್ಧಪಡಿಸಲಿದ್ದೀರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ನಿಮಗೆ ಇದುವರೆಗೆ ತೊಂದರೆ ಕೊಡುತ್ತಿರುವವರಿಗೆ ಅಡೆತಡೆಗಳಾಗಲಿವೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶುಭ ಫಲಗಳಿವೆ.

ಕರ್ಕಟಕ: ವ್ಯಾಪಾರಿಗಳಿಗೆ ತಮ್ಮ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಇಷ್ಟ ಮಿತ್ರರ ಭೇಟಿಯಾಗುವ ಅವಕಾಶವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಸರಕಾರಿ ನೌಕರರಿಗೆ ಕಾರ್ಯದೊತ್ತಡ ಹೆಚ್ಚುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಬಂಧು ಜನರ ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

 
ಕನ್ಯಾ: ವೃತ್ತಿಜೀವನದಲ್ಲಿ ಪುನಾರರಂಭ ಪಡೆಯಲಿದ್ದೀರಿ. ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ವಾಸಸ್ಥಳ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ಸಾಲಗಳು ಮರುಪಾವತಿಯಾಗಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯವಹಾರದಲ್ಲಿ ಕೊಂಚ ನಷ್ಟವಾದರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಜೀವನದಲ್ಲಿ ಆಶಾವಾದಿಗಳಾಗಿದ್ದರೆ ಉತ್ತಮ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗವೇ ವಾಸಿ.

ವೃಶ್ಚಿಕ: ಕೆಳ ಹಂತದ ನೌಕರರಿಗೆ ಭವಿಷ್ಯದ ಚಿಂತೆ ಕಾಡಲಿದೆ, ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನಕ್ಕೆ ಕಂಟಕ ಎದುರಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಕಷ್ಟದ ಸಮಯದಲ್ಲಿ ಸಹಾಯ ಮಾಡುವವರು ಯಾರೂ ಇಲ್ಲ ಎಂಬ ಅಸಹಾಯಕತೆ ಕಾಡಲಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮಕರ: ಸಾಂಸಾರಿಕವಾಗಿ ನೀವು ಕೈಗೊಳ್ಳುವ ಕೆಲವು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರ ಜವಾಬ್ಧಾರಿ ಹೆಚ್ಚಲಿದೆ. ತಾಳ್ಮೆ ಕಳೆದುಕೊಳ್ಳಬೇಡಿ.

ಕುಂಭ: ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪ್ರಸಂಗ ಎದುರಾದೀತು. ನೌಕರ ವರ್ಗಕ್ಕೆ ಸಂತಸದ ವಾರ್ತೆ ಸಿಗಲಿದೆ. ಉದ್ಯೋಗದಲ್ಲಿ ಹೊಸ ದಾರಿಗಳು ಗೋಚರವಾಗಲಿವೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಮೀನ: ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚಲಿದೆ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments