Publish Date: Mon, 03 Aug 2020 (12:07 IST)
Updated Date: Tue, 04 Aug 2020 (21:08 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಆಗಸ್ಟ್ 5 ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ರೆಡಿಯಾಗಿದೆ.
ಪ್ರಧಾನಿ ಮೋದಿ ಭೂಮಿ ಪೂಜೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ.
ಅತಿಥಿಗಳ ಲಿಸ್ಟ್ ಕೂಡಾ ರೆಡಿಯಾಗಿದ್ದು, ಸುಮಾರು 170 ಜನ ಕಾರ್ಯಕ್ರಮದಲ್ಲಿ ನೇರವಾಗಿ ಭಾಗಿಯಾಗುವ ಸಾಧ್ಯತೆಯಿದೆ. ಇದಕ್ಕಾಗಿ ಅಯೋಧ‍್ಯೆ ಈಗಾಗಲೇ ಮದುಮಗಳಂತೆ ಸಿಂಗಾರಗೊಂಡಿದೆ.