Publish Date: Mon, 03 Aug 2020 (21:34 IST)
Updated Date: Tue, 04 Aug 2020 (21:07 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನಡೆಯಲಿದ್ದು, ಅದರಲ್ಲಿ ರಾಜ್ಯದ ಪ್ರಮುಖ ಶ್ರೀಗಳು ಪಾಲ್ಗೊಳ್ಳುತ್ತಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ ಆಗಿರುವ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಸೇರಿದಂತೆ ರಾಜ್ಯದಿಂದ 8 ಪ್ರಮುಖರನ್ನು ಆಹ್ವಾನಿಸಲಾಗಿದೆ.
ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ)
ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ
ಇಸ್ಕಾನ್ ದೇವಸ್ಥಾನದ ಮಧು ಪಂಡಿತ ದಾಸ್
ಸುತ್ತೂರು ಮಠದ ಶ್ರೀಗಳು
ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ