Webdunia - Bharat's app for daily news and videos

Install App

ಆಹಾರವೂ ಚರ್ಮವನ್ನು ಕಾಪಾಡುತ್ತದೆ...

Webdunia
ಶನಿವಾರ, 1 ಫೆಬ್ರವರಿ 2014 (10:57 IST)
PR
ಕಲೆಯಿಲ್ಲದ ಹೊಳೆಯುವ ಚರ್ಮ ಇಂದಿನ ಯುವತಿಯರ ಕನಸಾಗಿದೆ. ಬಿಸಿಲು , ಏರ್ ಕಂಡೀಷನ್ , ಕಾಸ್ಮೆಟಿಕ್ಸ್ , ವಾತಾವರಣ ಮತ್ತು ಒತ್ತಡ ತ್ವಚೆಯ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮವನ್ನು ಉಂಟು ಮಾಡುತ್ತದೆ.ಕೆಳಗೆ ನೀಡಿರುವ ಅಂಶಗಳನ್ನು ಬದುಕಿನಲ್ಲಿ ಅಳವಡಿಸಿ ಕೊಂಡರೆ ಚರ್ಮದ ಸಮಸ್ಯೆಯನ್ನು ದೂರ ಮಾಡಿಕೊಳ್ಳ ಬಹುದಾಗಿದೆ.

ನೀವು ಯಾವುದನ್ನು ಸೇವಿಸುತ್ತೀರಿ ಎನ್ನುವ ಅಂಶಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದು ತುಂಬಾ ಮುಖ್ಯ.ಸುಂದರ ತ್ವಚೆಯ ಹೊಂದುವುದು ಕಲ್ಪನೆ ಎನ್ನುವ ಅಭಿಪ್ರಾಯ ನಿಮ್ಮಲ್ಲಿದ್ದರೆ ಅದು ತಪ್ಪು ಗ್ರಹಿಕೆ. ಹೊಟ್ಟೆಯು ಸರಿಯಾಗಿದ್ದರೆ ಆಗ ಆಹಾರವು ಸುಗಮವಾಗಿ ಜೀರ್ಣವಾಗುತ್ತದೆ, ಇದರಿಂದ ನಾವು ಸೇವಿಸುವ ಆಹಾರದಲ್ಲಿರುವ ಜೀವ ಸತ್ವಗಳು ದೇಹದಲ್ಲಿ ಸೇರ್ಪಡೆಯಾಗುತ್ತದೆ.ಅಷ್ಟೇ ಅಲ್ಲದೇ ದೇಹದ ಆರೋಗ್ಯವನ್ನು ದೂರ ಮಾಡುವಂತಹ ಬ್ಯಾಕ್ಟೀರಿಯಾಗಳು ಬೆಳವಣಿಗೆ ಕುಂಠಿತವಾಗುತ್ತದೆ. ಮೊಸರಿನಿಂದ ನಮ್ಮ ದೇಹಕ್ಕೆ ಒಳ್ಳೆಯ ಬ್ಯಾಕ್ಟೀರಿಯಾಗಳು ಸಿಗುತ್ತದೆ.ಅದೇ ರೀತಿ ಮುಸುಕು ಹೊಂದಿರುವ ಕಾಳುಗಳು, ಬಾಳೆ ಹಣ್ಣು, ಬೆಳ್ಳುಳ್ಳಿ, ಈರುಳ್ಳಿ, ಇವೆಲ್ಲವೂ ಆರೋಗ್ಯ ಹೆಚ್ಚಿಸುವಂತಹದ್ದು ,ಇದು ದೇಹದಲ್ಲಿ ರಕ್ತಹೀನತೆಯನ್ನು ದೂರ ಮಾಡುತ್ತದೆ.

ನೀರನ್ನು ಹೇರಳವಾಗಿ ಸೇವಿಸಿದರೆ ಇದು ಚರ್ಮದ ರಕ್ಷಣೆಯನ್ನು ಮಾಡುವುದಲ್ಲದೇ ಅದರ ಹೊಳಪನ್ನು ಹೆಚ್ಚಿಸುತ್ತದೆ.

ಬಣ್ಣವು ಚರ್ಮದ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಉಂಟು ಮಾಡುತ್ತದೆ. ನಿಮ್ಮ ತ್ವಚೆಯನ್ನು ಕಾಂತಿಯುಕ್ತಗೊಳಿಸುತ್ತದೆ, ಇದು ವಾರ್ಧಕ್ಯದ ಸಮಸ್ಯೆಯನ್ನು ದೂರ ಮಾಡುತ್ತದೆ . ಬ್ಲಾಕ್ ಬೆರ್ರಿ, ಬ್ಲೂ ಬೆರ್ರಿ, ಹುಳಿಯಿಲ್ಲದ ದಾಕ್ಷಿ ಹಣ್ಣುಗಳು, ಸ್ಟ್ರಾ ಬೆರ್ರಿ,

ಟೊಮೇಟೊ ದಲ್ಲಿರುವ ಲೈಕೊಪಿನ್, ದಾಳಿಂಬೆಯಲ್ಲಿರುವ ಪಾಲಿಫೆನಾಲ್ಸ್ ಇವೆಲ್ಲವೂ ಚರ್ಮದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕಾರಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ