Webdunia - Bharat's app for daily news and videos

Install App

ಮನೆಯಲ್ಲಿಯೇ ಅಡಗಿವೆ ಸೌಂದರ್ಯದ ಟಿಪ್ಸ್

Webdunia
ಮಂಗಳವಾರ, 5 ಜೂನ್ 2018 (16:30 IST)
ಹೊಳೆಯುವ ಮತ್ತು ಕಾಂತಿಯುತ ಚರ್ಮವನ್ನು ಪಡೆಯುವುದು ಪ್ರತಿಯೊಬ್ಬರ ಕನಸೂ ಆಗಿದೆ. ಬ್ಯೂಟಿಪಾರ್ಲರ್‌ಗೆ ಹೋಗಿ ಗಂಟೆಗಟ್ಟಲೆ ಕುಳಿತು ಹಣ ಕೊಟ್ಟು ಬರುತ್ತಾರೆ. ಆದರೆ ಮನೆಯಲ್ಲಿ ಸುಲಭವಾಗಿ ಸಿಗುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾಂತಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಬಹುದು.
1. ಜೇನು ತುಪ್ಪ ಮತ್ತು ನಿಂಬೆ ಹಣ್ಣಿನ ಫೇಸ್‌ಪ್ಯಾಕ್ -
 
1 ಚಮಚ ಜೇನು ತುಪ್ಪ ಮತ್ತು 2 ಚಮಚ ನಿಂಬೆ ಹಣ್ಣಿನ ರಸವನ್ನು ಮಿಶ್ರಣ ಮಾಡಿ, ಮುಖಕ್ಕೆ ಲೇಪಿಸಿ 15 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಿ.
 
2. ಅಕ್ಕಿ ಹಿಟ್ಟಿನ ಫೇಸ್‌ಪ್ಯಾಕ್ -
 
2 ಚಮಚ ಅಕ್ಕಿ ಹಿಟ್ಟಿಗೆ, 1 ಚಮಚ ಮೊಸರನ್ನು ಸೇರಿಸಿ ಮುಖಕ್ಕೆ ಹಗುರವಾಗಿ ಉಜ್ಜಿ, 2 ನಿಮಿಷಗಳ ಕಾಲ ಸ್ಕರ್ಬ್ ಮಾಡಿ, ನಂತರ ಮುಖವನ್ನು ತೊಳೆದುಕೊಳ್ಳಿ.
 
3. ಮುಲ್ತಾನಿ ಮಿಟ್ಟಿ ಫೇಸ್‌ಪ್ಯಾಕ್ -
 
1 ಚಮಚ ಮುಲ್ತಾನಿಮಿಟ್ಟಿಗೆ ಸ್ವಲ್ಪ ನಿಂಬೆ ರಸ ಮತ್ತು ಗುಲಾಬಿ ಜಲವನ್ನು ಮಿಶ್ರಣ ಮಾಡಿ, ಮುಖಕ್ಕೆ ಲೇಪಿಸಿಕೊಳ್ಳಿ. ಈ ಪ್ಯಾಕ್ ಒಣಗಿದ ನಂತರ ತಂಪಾದ ನೀರಿಸಿಂದ ಮುಖವನ್ನು ತೊಳೆದುಕೊಳ್ಳಿ. ಈ ಫೇಸ್‌ಪ್ಯಾಕ್ ಅನ್ನು ವಾರಕ್ಕೆ 3 ಬಾರಿ ಬಳಸಿ.
 
4. ಬಾದಾಮಿ ಪುಡಿ ಮತ್ತು ಮೊಸರಿನ ಫೇಸ್‌ಪ್ಯಾಕ್ -
 
1 ಚಮಚ ಬಾದಾಮಿ ಪುಡಿಗೆ ಮತ್ತು 1 ಚಮಚ ಮೊಸರನ್ನು ಮಿಶ್ರಣ ಮಾಡಿ, ಮುಖಕ್ಕೆ ಲೇಪಿಸಿ ಹಗುರವಾಗಿ ಉಜ್ಜಿ 10 ನಿಮಿಷ ಹಾಗೆ ಬಿಡಿ, ನಂತರ ತಂಪಾದ ನೀರಿಸಿಂದ ಮುಖವನ್ನು ತೊಳೆದುಕೊಳ್ಳಿ.
 
5. ಕಡಲೆ ಹಿಟ್ಟಿನ ಫೇಸ್‌ಪ್ಯಾಕ್ -
1 ಚಮಚ ಕಡಲೆ ಹಿಟ್ಟಿಗೆ, ಸ್ವಲ್ಪ ಅರಿಶಿಣ ಮತ್ತು ಹಾಲು ಹಾಕಿ ಮಿಶ್ರಣ ಮಾಡಿ, ಮುಖಕ್ಕೆ ಲೇಪಿಸಿ, ಒಣಗಲು ಬಿಡಿ. 10 ನಿಮಿಷಗಳ ನಂತರ ತಂಪಾದ ನೀರಿನಿಂದ ಮುಖವನ್ನು ತೊಳೆದುಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments