ಚೀನಾ ದೇಶಕ್ಕೆ ಭಾರತದ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರಾ ನಟ ಅಮೀರ್‌ ಖಾನ್‌!

Webdunia
ಭಾನುವಾರ, 29 ಏಪ್ರಿಲ್ 2018 (06:15 IST)
ನವದಿಲ್ಲಿ : ಚೀನಾ ದೇಶಕ್ಕೆ ಭಾರತದ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸ್ಟಾರ್ ನಟರೊಬ್ಬರನ್ನು ನೇಮಿಸುವುದಾಗಿ ಕೇಂದ್ರ ಸರ್ಕಾರ ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದೆ.


ಹೌದು. ಚೀನಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಧ್ಯಕ್ಷ ಜನ್‌ಪಿಂಗ್‌ ಅವರನ್ನು ಭೇಟಿ ಮಾಡಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಆ ಸಂದರ್ಭದಲ್ಲಿ ಚೀನಾಗೆ ಭಾರತದ ಬ್ರಾಂಡ್‌ ಅಂಬಾಸಿಡರ್‌ ಆಯ್ಕೆ ವಿಷಯವನ್ನು ಚರ್ಚಿಸಿದ್ದಾರೆ.
ಬಾಲಿವುಡ್ ನಟ ಅಮೀರ್‌ ಖಾನ್‌ ಅವರ  'ದಂಗಲ್‌' ಮತ್ತು 'ಸೀಕ್ರೆಟ್‌ ಸೂಪರ್‌ಸ್ಟಾರ್‌' ಚಿತ್ರಗಳಿಗೆ ಚೀನಾದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಕಿದ್ದು, ‘ನಾನೂ ಸೇರಿದಂತೆ ಚೀನಾದ ಹಲವು ಜನತೆ ಅಮೀರ್‌ ನಟನೆಯ ಸ್ಫೂರ್ತಿದಾಯಕ 'ದಂಗಲ್‌' ಸಿನಿಮಾವನ್ನು ನೋಡಿದ್ದೇವೆ’ ಎಂದು ಚೀನಾದ ವಿದೇಶಾಂಗ ಸಚಿವಾಯಲಯದ ವಕ್ತಾರ ಹುವಾ ಚುನೈಯಿಂಗ್‌ ಅವರು ಕೂಡ  ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ಮತ್ತು ವ್ಯಾಪಾರ ವೃದ್ಧಿ ಗಮನದಲ್ಲಿಟ್ಟು ಅಮೀರ್‌ ಖಾನ್‌ ಅವರನ್ನು ರಾಯಭಾರಿಯಾಗಿ ನೇಮಿಸಲು ಮುಂದಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments