Webdunia - Bharat's app for daily news and videos

Install App

ಡಿವೋರ್ಸ್ ಬಗ್ಗೆ ಅಭಿಷೇಕ್ ಬಚ್ಚನ್ ಹೊಸ ಪೋಸ್ಟ್ ವೈರಲ್

Krishnaveni K
ಗುರುವಾರ, 18 ಜುಲೈ 2024 (12:15 IST)
ಮುಂಬೈ: ಅಭಿಷೇಕ್ ಬಚ್ಚನ್ ಡಿವೋರ್ಸ್ ಕುರಿತಾದ ಪೋಸ್ಟ್ ಒಂದನ್ನು ಲೈಕ್ ಮಾಡಿರುವುದು ಈಗ ಐಶ್ವರ್ಯಾ ರೈ ಜೊತೆಗಿನ ವಿಚ್ಛೇದನ ವದಂತಿಗಳ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ಇತ್ತೀಚೆಗೆ ಅನಂತ್ ಅಂಬಾನಿ ಮದುವೆ ಸಂದರ್ಭದಲ್ಲಿ ಐಶ್ವರ್ಯಾ ರೈ ಮತ್ತು ಮಗಳು ಆರಾಧ್ಯ ಬಚ್ಚನ್ ಅಭಿಷೇಕ್, ಅಮಿತಾಭ್ ಬಚ್ಚನ್ ಜೊತೆಗೆ ಬಂದಿರಲಿಲ್ಲ ಮತ್ತು ಫೋಟೋಗೂ ಪೋಸ್ ಕೊಟ್ಟಿರಲಿಲ್ಲ. ಇಬ್ಬರೂ ಪ್ರತ್ಯೇಕವಾಗಿ ಫೋಟೋಗೆ ಪೋಸ್ ಕೊಟ್ಟಿರುವುದರಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಊಹಾಪೋಹ ಮತ್ತಷ್ಟು ಹೆಚ್ಚಾಗಿತ್ತು.

ಇದಲ್ಲದೆ, ಮದುವೆ ಮುಗಿದ ಬೆನ್ನಲ್ಲೇ ಐಶ್ವರ್ಯಾ ತಮ್ಮ ಮಗಳೊಂದಿಗೆ ಏಕಾಂಗಿಯಾಗಿ ವಿದೇಶಕ್ಕೆ ತೆರಳಿದ್ದರು. ಈ ವೇಳೆಯೂ ಅಭಿಷೇಕ್ ಜೊತೆಗಿರಲಿಲ್ಲ. ಹೀಗಾಗಿ ಇಬ್ಬರೂ ಪ್ರತ್ಯೇಕವಾಗಿ ಜೀವನ ಮಾಡುತ್ತಿದ್ದಾರೆ ಎಂಬ ರೂಮರ್ ಗಳು ದಟ್ಟವಾಗಿತ್ತು. ಇದಕ್ಕೆ ಸಾಕ್ಷಿಯೆಂಬಂತೆ ಈಗ ಅಭಿಷೇಕ್ ಪೋಸ್ಟ್ ಒಂದನ್ನು ಲೈಕ್ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಲೇಖಕಿ ಹೀನಾ ಖಂಡೇವಾಲ ಅವರ ವಿಚ್ಛೇದನ ತೆಗೆದುಕೊಳ್ಳುವುದು ಯಾರಿಗೂ ಅಷ್ಟು ಸುಲಭವಲ್ಲ. ಕೆಲವೊಮ್ಮೆ ನಾವು ನಿರೀಕ್ಷಿಸಿದಂತೆ ಜೀವನವು ಇರುವುದಿಲ್ಲ.  ಒಟ್ಟಿಗೆ ಇದ್ದು ದಶಕಗಳ ನಂತರ ಬೇರೆಯಾದಾಗ ಪ್ರಮುಖ ವಿಷಯಗಳಿಗೆ ಪರಸ್ಪರ ಅವಲಂಬಿಸಿರುವ ನಂತರ ಹೇಗೆ ಜೀವನ ನಿಭಾಯಿಸುತ್ತಾರೆ’ ಎಂಬ ಪೋಸ್ಟ್ ನ್ನು ಅಭಿಷೇಕ್ ಲೈಕ್ ಮಾಡಿದ್ದಾರೆ. ಇದನ್ನು ನೋಡಿದಾಗ ಇಬ್ಬರೂ ದೂರವಾಗಿರುವುದು ನಿಜವೇ ಎಂಬ ಅನುಮಾನ ಮತ್ತಷ್ಟು ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments