Publish Date: Fri, 15 Dec 2023 (09:00 IST)
Updated Date: Fri, 15 Dec 2023 (09:10 IST)
ಮುಂಬೈ: ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೆಲ್ಕಂ ಟು ದಿ ಜಂಗಲ್ ಎಂಬ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ಶ್ರೇಯಸ್ ಶೂಟಿಂಗ್ ಮುಗಿಸಿ ಮನೆಗೆ ಹೊರಡುವ ಸಿದ್ಧತೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯ ಸುಧಾರಿಸಿಕೊಳ್ಳುತ್ತಿದೆ ಎನ್ನಲಾಗಿದೆ.
ಶೂಟಿಂಗ್ ಗೆ ಹೊರಡುವಾಗ ಅವರಿಗೆ ಯಾವುದೇ ಅನಾರೋಗ್ಯ ಸಮಸ್ಯೆಯಿರಲಿಲ್ಲ. ಸಂಜೆ ವೇಳೆ ಮನೆಗೆ ಹೊರಡುವ ಸಮಯದಲ್ಲಿ ಏಕಾಏಕಿ ಅಸ್ವಸ್ಥರಾದರು ಎಂದು ತಿಳಿದುಬಂದಿದೆ.
ಅವರ ಆರೋಗ್ಯ ಸುಧಾರಿಸಲು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಬಾಲಿವುಡ್ ನ ಖ್ಯಾತ ನಟರ ಜೊತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಶ್ರೇಯಸ್ ಓಂ ಶಾಂತಿ ಓಂ ಸಿನಿಮಾದಲ್ಲಿ ಶಾರುಖ್ ಖಾನ್ ಗೆಳೆಯನ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು.