Select Your Language

Notifications

webdunia
webdunia
webdunia
webdunia

ಬಾಲಿವುಡ್ ನ ಮೋಹಕ ತಾರೆ ಶ್ರೀದೇವಿ ಇನ್ನಿಲ್ಲ!

ಶ್ರೀದೇವಿ
ದುಬೈ: ಬಾಲಿವುಡ್ ನ ಹಿರಿಯ ನಟಿ ಶ್ರಿದೇವಿ ಶನಿವಾರ ರಾತ್ರಿ ದುಬೈನಲ್ಲಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದು, ದೇಶದ ಚಿತ್ರರಂಗವೇ ದಿಗ್ಭ್ರಮೆಗೊಳ್ಳುವಂತಾಗಿದೆ.


ಬಾಲನಟಿಯಾಗಿ, 4ನೇ ವರ್ಷಕ್ಕೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ 54 ವರ್ಷದ ಈ ನಟಿ ದೂರದ ದುಬೈನಲ್ಲಿ ಇಹಲೋಕ ತ್ಯಜಿಸಿದ್ದಾರೆ.


ಮೋಹಕ ತಾರೆ ಶ್ರೀದೇವಿ ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.


13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 260ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಲಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಪ್ರಿಯಾಂಕಾ ಚೋಪ್ರಾ ಅವರು ವೈನ್ ಗ್ಲಾಸ್ ನಿಂದ ತಲೆಗೆ ಬಡಿದುಕೊಂಡಿದ್ದು ಯಾಕೆ ಗೊತ್ತಾ?