ನಟಿ ದೀಪಿಕಾ ಪಡುಕೋಣೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆ; ರಣವೀರ್ ಸಿಂಗ್ ಗಪ್ ಚುಪ್ ಆಗಿದ್ದಿದ್ದು ಯಾಕೆ ಗೊತ್ತಾ...?

Webdunia
ಭಾನುವಾರ, 11 ಫೆಬ್ರವರಿ 2018 (06:31 IST)
ಮುಂಬೈ : ದೀಪಿಕಾ ಅಭಿನಯದ ಪದ್ಮಾವತ್ ಸಿನಿಮಾ ವಿರೋಧಗಳ ನಡುವೆಯೂ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಂಡಿತು. ಆದರೆ ಈ ಮಧ್ಯ ನಟಿ ದೀಪಿಕಾ ಪಡುಕೋಣೆ ಅವರಿಗೆ ಅನೇಕ ಬೆದರಿಕೆ ಕರೆಗಳು ಬಂದಿದ್ದವು.


ಈ ಕುರಿತು ಸಂದರ್ಶನವೊಂದರಲ್ಲಿ ರಣ್‍ವೀರ್ ಸಿಂಗ್ ಅವರ ಬಳಿ ಚಿತ್ರ ಬಿಡುಗಡೆಗೂ ಮೊದಲು ದೀಪಿಕಾ ಪಡುಕೋಣೆ ಅವರಿಗೆ ಅನೇಕ ಬೆದರಿಕೆ ಕರೆಗಳು ಬಂದಿದ್ದರೂ ಕೂಡ ನೀವು ಯಾಕೆ ಪ್ರತಿಕ್ರಿಯಿಸಲಿಲ್ಲ ಎಂದು ಕೇಳಿದ ಪ್ರಶ್ನೆಗೆ ಅವರು “ಸಿನಿಮಾ ಬಿಡುಗಡೆ ವೇಳೆ ದೀಪಿಕಾಗೆ ಬೆದರಿಕೆಗಳು ಬಂದಾಗ ಸಹಜವಾಗಿಯೇ ಕೋಪ ಬಂದಿತ್ತು. ಆದ್ರೆ ನಾನು ನಿರ್ಮಾಪಕರು ಹಾಗೂ ನಿರ್ದೇಶಕರು ನೀಡಿದ ಕಟ್ಟುನಿಟ್ಟಾದ ಸೂಚನೆಯನ್ನು ನಾನು ಮೀರುವಂತಿರಲಿಲ್ಲ.


ಇಂತಹ ಸಮಯದಲ್ಲಿ ಜನರು ತಿಳಿದು ಅಥವಾ ತಿಳಿಯದೆನೋ ವಿವಾದಗಳನ್ನು ಸೃಷ್ಟಿ ಮಾಡಿರುತ್ತಾರೆ. ಒಂದು ವೇಳೆ ನಾನು ಯಾವುದೇ ರೀತಿಯಲ್ಲಿ ಅದಕ್ಕೆ ಪ್ರತಿಕ್ರಿಯಿಸಿದರೆ ಅದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗುತಿತ್ತು. ಈ ಕಾರಣಕ್ಕಾಗಿ ಯಾವುದೇ ಹೇಳಿಕೆಯನ್ನು ನೀಡಲಿಲ್ಲ. ಈ ಸಿನಿಮಾದ ವಿವಾದ ನಿರ್ಮಾಪಕರು ಹಾಗೂ ನಿರ್ದೇಶಕರ ಜೀವನವನ್ನು ನಿರ್ಧಾರ ಮಾಡುವಂತದಾಗಿತ್ತು. ನನ್ನ ನಿಲುವು ಮತ್ತು ಪ್ರತಿಕ್ರಿಯೆ ಅವರಿಗೆ ಯಾವುದೇ ಹಾನಿಯನ್ನುಂಟು ಮಾಡಬಾರದೆಂದು ನಾನು ಸುಮ್ಮನಿದ್ದೆ. ಅವರು ಕೊಟ್ಟ ಆದೇಶದಂತೆ ನಾನು ನಡೆದುಕೊಂಡಿದ್ದೇನೆ” ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಮುಂದಿನ ಸುದ್ದಿ
Show comments