Webdunia - Bharat's app for daily news and videos

Install App

ಡೆನ್ಮಾರ್ಕ್ ಬ್ಯಾಡ್ಮಿಂಟನ್ ತಾರೆಯನ್ನು ಮದುವೆಯಾಗಲಿರುವ ನಟಿ ತಾಪ್ಸಿ ಪನ್ನು

Krishnaveni K
ಬುಧವಾರ, 28 ಫೆಬ್ರವರಿ 2024 (14:11 IST)
Photo Courtesy: Twitter
ಮುಂಬೈ: ಬಾಲಿವುಡ್ ನಟಿ ತಾಪ್ಸಿ ಪನ್ನು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳೆಯ, ಡೆನ್ಮಾರ್ಕ್ ನ ಬ್ಯಾಡ್ಮಿಂಟನ್ ತಾರೆ ಮಥಿಯಾಸ್ ಬೋ ಜೊತೆ ತಾಪ್ಸಿ ಸಪ್ತಪದಿ ತುಳಿಯಲಿದ್ದಾರೆ.

ಡೆನ್ಮಾರ್ಕ್ ಮೂಲದ ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಜೊತೆ ತಾಪ್ಸಿ ಹಲವು ಸಮಯದಿಂದ ಡೇಟಿಂಗ್ ನಲ್ಲಿದ್ದಾರೆ. ಬಾಲಿವುಡ್ ಗೆ ಕಾಲಿಟ್ಟ ಸಮಯದಿಂದಲೇ ಇಬ್ಬರ ನಡುವೆ ಸ್ನೇಹವಿದೆ. ಇದೀಗ ತಾಪ್ಸಿ-ಮಥಿಯಾಸ್ ವಿವಾಹವಾಗಲು ತೀರ್ಮಾನಿಸಿದ್ದಾರೆ.  ಮಾರ್ಚ್ ಕೊನೆಯಲ್ಲಿ ಇಬ್ಬರ ಮದುವೆ ನಡೆಯಲಿದೆ. ಮಥಿಯಾಸ್ ಕ್ರಿಶ್ಚಿಯನ್ ಧರ್ಮೀಯರು. ತಾಪ್ಸಿ ಸಿಖ್ ಧರ್ಮೀಯರಾಗಿದ್ದಾರೆ. ಹೀಗಾಗಿ ಎರಡೂ ಧರ್ಮದ ಸಂಪ್ರದಾಯದಂತೆ ಮದುವೆ ಕಾರ್ಯಕ್ರಮ ನಡೆಯಲಿದೆ. ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ.

ತಾಪ್ಸಿಗೆ 36 ವರ್ಷವಾದರೆ ಮಥಿಯಾಸ್ ಗೆ 43 ವರ್ಷ. ಇಬ್ಬರ ನಡುವೆ ಬರೋಬ್ಬರಿ 7 ವರ್ಷಗಳ ಅಂತರವಿದೆ. ಮಥಿಯಾಸ್ ಯುರೋಪಿಯನ್ ಗೇಮ್ಸ್ ನ ಚಿನ್ನದ ಪದಕ ವಿಜೇತ. ಯುರೋಪಿಯನ್ ಚಾಂಪಿಯನ್ ಶಿಪ್, ಸಮ್ಮರ್ ಒಲಿಂಪಿಕ್ಸ್ ಸೇರಿದಂತೆ ಅನೇಕ ಕ್ರೀಡಾ ಕೂಟಗಳಲ್ಲಿ ಮಥಿಯಾಸ್ ಪದಕ ಗೆದ್ದು ಸಾಧನೆ ಮಾಡಿದ್ದರು.

ಇನ್ನು, ತಾಪ್ಸಿ 2010 ರಲ್ಲಿ ಮೊದಲ ಬಾರಿಗೆ ತೆಲುಗು ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಬಳಿಕ 2013 ರಲ್ಲಿ ಬಾಲಿವುಡ್ ನತ್ತ ಪ್ರಯಾಣ ಬೆಳೆಸಿದರು. ಇದುವರೆಗೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments