ಮುಂಬೈ: ಕೊರೋನಾ ಸೋಂಕಿನಿಂದ ಬಳಲುತ್ತಿರುವ ನಟ ಅಕ್ಷಯ್ ಕುಮಾರ್ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆಯಷ್ಟೇ ಅಕ್ಷಯ್ ತಮಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದರು. ಇದೀಗ ಅವರ ಆರೋಗ್ಯದಲ್ಲಿ ತುಸು ಏರುಪೇರಾಗಿರುವುದರಿಂದ ವೈದ್ಯರು ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ.
ಇದರೊಂದಿಗೆ ಬಾಲಿವುಡ್ ನಲ್ಲಿ ಕೊರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಮೀರ್ ಖಾನ್, ರಣಬೀರ್ ಕಪೂರ್, ಗೋವಿಂದ ಇತ್ತೀಚೆಗಷ್ಟೇ ಕೊರೋನಾ ಸೋಂಕಿತರಾಗಿರುವುದಾಗಿ ಹೇಳಿಕೊಂಡಿದ್ದರು. ದೇಶದಲ್ಲಿ ಕೊರೋನಾ ಎರಡನೇ ಅಲೆ ಗಂಭೀರ ಸ್ಥಿತಿಗೆ ತಲುಪಿರುವುದಕ್ಕೆ ಇದು ತಾಜಾ ಉದಾಹರಣೆಯಾಗಿದೆ.