Publish Date: Sat, 17 Feb 2018 (06:59 IST)
Updated Date: Sat, 17 Feb 2018 (07:03 IST)
ಮುಂಬೈ : ಬಾಲಿವುಡ್ ನ ಪ್ಯಾಡ್ ಮ್ಯಾನ್’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಈವರೆಗೆ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಚಿತ್ರದ ನಟ ಅಕ್ಷಯ್ ಕುಮಾರ್ ಅವರು ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲಿಯೂ ಕೂಡ ಹೀರೋ ಆಗಿದ್ದಾರೆ.
ನಟ ಅಕ್ಷಯ್ ಕುಮಾರ್ ಅವರು ಸಿನಿಮಾದಲ್ಲಿ ಮಹಿಳೆಯರ ಸಮಸ್ಯೆಗೆ ಸ್ಪಂದಿಸಿದ್ದು ಮಾತ್ರವಲ್ಲದೆ ನಿಜ ಜೀವನದಲ್ಲೂ ಕೂಡ ಮಹಿಳೆಯರಲ್ಲಿ ಋತುಸ್ರಾವದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು, ಮುಂಬೈನ ಸೆಂಟ್ರಲ್ ಎಸ್ ಟಿ ಬಸ್ ಡಿಪೋದಲ್ಲಿ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮಷಿನ್ ಒಂದನ್ನು ಅಳವಡಿಸಿದ್ದಾರೆ. ಈ ಮಷಿನ್ ಅನ್ನು ಅಕ್ಷಯ್ ಕುಮಾರ್ ಅವರು ಶಿವಸೇನೆ ಅಧ್ಯಕ್ಷ ಆದಿತ್ಯ ಠಾಕ್ರೆ ಅವರೊಂದಿಗೆ ಉದ್ಘಾಟನೆ ಮಾಡಿದ್ದಾರೆ. ದೇಶಾದ್ಯಂತ ಇಂತಹ ಸ್ಯಾನಿಟರಿ ಪ್ಯಾಡ್ ವೆಂಡಿಂಗ್ ಮಷಿನ್ ಗಳನ್ನು ಅಳವಡಿಸುವ ಉದ್ದೇಶವನ್ನು ಕೂಡ ಹೊಂದಿರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ