Webdunia - Bharat's app for daily news and videos

Install App

ಪ್ರೀತಿ ಒಪ್ಪಿಕೊಂಡ ಆಲಿಯಾ ಭಟ್!

Webdunia
ಶುಕ್ರವಾರ, 5 ನವೆಂಬರ್ 2021 (16:23 IST)
ದೀಪದ ಹಬ್ಬದ ಈ ಶುಭ ಸಂದರ್ಭದಲ್ಲಿ ನಟಿ ಆಲಿಯಾ ಭಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.
ರಣಬೀರ್ ಕಪೂರ್ ಜೊತೆ ಆಲಿಯಾ ಪ್ರೀತಿಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಅವರು ಸಾರ್ವಜನಿಕವಾಗಿ ಆ ಬಗ್ಗೆ ಮಾತನಾಡುವುದು ಕಡಿಮೆ. ಹಾಗಂತ ಕದ್ದು ಮುಚ್ಚಿ ಈ ಜೋಡಿ ಹಕ್ಕಿಗಳು ಓಡಾಡುತ್ತಿಲ್ಲ. ಅವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಅನೇಕ ಫೋಟೋಗಳು ಹರಿದಾಡುತ್ತಿವೆ. ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಂಡಿಲ್ಲ. ಈಗ ದೀಪಾವಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ಆಲಿಯಾ ಭಟ್ ಇನ್ನೊಂದು ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
ಬಹಳ ಸಂಭ್ರಮದಿಂದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ದೀಪಾವಳಿ ಆಚರಿಸಿದ್ದಾರೆ. ಇಬ್ಬರು ಪರಸ್ಪರ ತಬ್ಬಿಕೊಂಡು ಕ್ಯಾಮೆರಾಗೆ ಪೋಸ್ ಕೂಡ ನೀಡಿದ್ದಾರೆ. ‘ಒಂದಷ್ಟು ಪ್ರೀತಿ.. ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಆ ಫೋಟೋಗೆ ಆಲಿಯಾ ಭಟ್ ಕ್ಯಾಪ್ಷನ್ ನೀಡಿದ್ದಾರೆ. ಇನ್ನೊಂದು ಫೋಟೋದಲ್ಲಿ ದೀಪಗಳನ್ನು ಹಿಡಿದುಕೊಂಡಿರುವ ಅವರು, ‘ಒಂದಷ್ಟು ಬೆಳಕು.. ಹ್ಯಾಪಿ ದೀಪಾವಳಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ.
ಈ ಫೋಟೋ ನೋಡಿದ ಬಳಿಕ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ಗೆ ಎಲ್ಲರೂ ಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಅಲ್ಲದೇ, ಮದುವೆ ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಈ ಜೋಡಿ ಹಕ್ಕಿಗಳಿಂದ ಉತ್ತರ ಸಿಕ್ಕಿಲ್ಲ. ಇಬ್ಬರ ಮದುವೆ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಇಬ್ಬರು ಹಸೆ ಮಣೆ ಏರಬೇಕಿತ್ತು. ಆದರೆ ಲಾಕ್ಡೌನ್ ಕಾರಣದಿಂದ ಮದುವೆ ದಿನಾಂಕ ಮುಂದಕ್ಕೆ ಹೋಗಿದೆ.
ಸೆ.28ರಂದು ರಣಬೀರ್ ಕಪೂರ್ ಜನ್ಮದಿನ. ಅಂದು ಅವರು ಆಲಿಯಾ ಜೊತೆಗೆ ರಾಜಸ್ಥಾನಕ್ಕೆ ತೆರಳಿದ್ದರು. ಬರ್ತ್ಡೇ ಪಾರ್ಟಿ ಜೊತೆಯಲ್ಲಿ ಮದುವೆಗೆ ಸ್ಥಳ ನೋಡಿಕೊಂಡು ಬರುವ ಉದ್ದೇಶದಿಂದಲೇ ಅವರು ರಾಜಸ್ಥಾನಕ್ಕೆ ಹೋಗಿದ್ದರು ಎಂದು ಸುದ್ದಿ ಆಗಿತ್ತು. ಆದರೆ ಆ ಬಗ್ಗೆ ಈ ಪ್ರಯಣಪಕ್ಷಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments