Webdunia - Bharat's app for daily news and videos

Install App

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ನಟ ಅಮಿತಾಭ್ ಬಚ್ಚನ್

Krishnaveni K
ಶುಕ್ರವಾರ, 15 ಮಾರ್ಚ್ 2024 (13:43 IST)
Photo Courtesy: Twitter
ಮುಂಬೈ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದು ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಯಿತು. ತಕ್ಷಣವೇ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಬ್ಲಾಕ್ ಸರಿಪಡಿಸಲಾಗಿದೆ. ಸದ್ಯಕ್ಕೆ ಅಮಿತಾಭ್ ಆರೋಗ್ಯ ಸುಧಾರಿಸಿದೆ ಎನ್ನಲಾಗಿದೆ. ಅವರಿಗೆ ಈಗ 81 ವರ್ಷ.

ಈ ಇಳಿವಯಸ್ಸಿನಲ್ಲೂ ಅಮಿತಾಭ್ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್ ನಾಯಕರಾಗಿರುವ ಕಲ್ಕಿ ಸಿನಿಮಾ ಶೂಟಿಂಗ್ ನಲ್ಲಿ ಸತವಾಗಿ ತೊಡಗಿಸಿಕೊಂಡಿದ್ದರು. ಇದರಿಂದ ಅವರಿಗೆ ದಣಿವಾಗಿದೆ. ಕೆಲವು ದಿನ ಬ್ರೇಕ್ ಪಡೆಯಲು ನಿರ್ಧರಿಸಿದ್ದರು. ಇದರ ಬೆನ್ನಲ್ಲೇ ಅನಾರೋಗ್ಯ ಕಾಣಿಸಿಕೊಂಡಿದೆ.

ನಿನ್ನೆ ರಾತ್ರಿಯೂ ಕೂಡಾ ಅವರು ತಮ್ಮ ಅಭಿಮಾನಿಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದು ಸಂವಾದ ನಡೆಸಿದ್ದರು. ಆದರೆ ಇಂದು ಬೆಳಿಗ್ಗೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಸದ್ಯಕ್ಕೆ ಅವರು ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments