Publish Date: Sat, 12 Aug 2017 (11:36 IST)
Updated Date: Sat, 12 Aug 2017 (11:41 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ‘ಥಗ್ಸ್ ಆಫ್ ಹಿಂದೂಸ್ತಾನ್’ ಚಿತ್ರದ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಆದರೆ ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಮೂಲಗಳು ಹೇಳಿವೆ.
ಶೂಟಿಂಗ್ ವೇಳೆ ಹೆಗಲಿಗೆ ಗಾಯಮಾಡಿಕೊಂಡಿದ್ದಾರೆ. ಅವರಿಗೆ ಸಣ್ಣ ಮಟ್ಟಿಗೆ ಎಲುಬಿಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ತುರ್ತು ಚಿಕಿತ್ಸೆ ಪಡೆಯಲಾಗಿದ್ದು, ಗಾಯದ ಗಂಭೀರತೆ ಬಗ್ಗೆ ಮುಂಬೈಗೆ ಶೂಟಿಂಗ್ ಮುಗಿಸಿ ಬಂದ ಮೇಲೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಿ ತಿಳಿದುಕೊಳ್ಳಲಾಗುವುದು ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.
ಗಾಯಗೊಂಡಿದ್ದರೂ, ಚಿತ್ರತಂಡಕ್ಕೆ ತೊಂದರೆಯಾಗಬಹುದು ಎಂಬ ಹಿನ್ನಲೆಯಲ್ಲಿ ಅಮಿತಾಭ್ ಮತ್ತೆ ಶೂಟಿಂಗ್ ಮುಂದುವರಿಸಿದರು ಎಂದು ತಿಳಿದುಬಂದಿದೆ. ಹಿಂದೊಮ್ಮೆ ಕೂಲಿ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಅಮಿತಾಭ್ ಗಂಭೀರವಾಗಿ ಗಾಯಗೊಂಡಿದ್ದನ್ನು ಯಾವತ್ತೂ ಮರೆಯುವಂತಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ