Publish Date: Mon, 24 Oct 2022 (09:51 IST)
Updated Date: Mon, 24 Oct 2022 (09:53 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ಶೂಟಿಂಗ್ ವೇಳೆ ಅವರ ಎಡಗಾಲಿಗೆ ಗಾಯವಾಗಿದ್ದು ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಕೆಲವು ದಿನಗಳ ಕಾಲ ಅಮಿತಾಭ್ ಗೆ ವಿಶ‍್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.
ಇತ್ತೀಚೆಗಷ್ಟೇ ಅಮಿತಾಭ್ ಕೊರೋನಾ ಕಾರಣದಿಂದ ಕೆಲವು ದಿನ ವಿಶ್ರಾಂತಿ ಪಡೆದಿದ್ದರು. ಈಗಷ್ಟೇ ಚೇತರಿಸಿಕೊಂಡು ಶೂಟಿಂಗ್ ಗೆ ಮರಳಿದ್ದರು.
-Edited by Rajesh Patil