Publish Date: Tue, 13 Mar 2018 (13:26 IST)
Updated Date: Tue, 13 Mar 2018 (13:28 IST)
ಮುಂಬೈ : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಟಿಸಲಿರುವ ‘ಥಗ್ಸ್ ಆಫ್ ಹಿಂದೂಸ್ತಾನ್ ‘ಚಿತ್ರದ ಶೂಟಿಂಗ್ ಜೋದ್ಪುರದಲ್ಲಿ ನಡೆಯುತ್ತಿದ್ದು, ಇದೀಗ ಚಿತ್ರದ ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳವಾರ (ಇಂದು) ಬೆಳ್ಳಿಗ್ಗೆ ತಮ್ಮ ಆರೋಗ್ಯ ಸರಿಯಿಲ್ಲ ಎಂದು ತಿಳಿಸಿದ್ದ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ಗೆ ತೆರಳಿದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿ ಮತ್ತಷ್ಟು ಸಮಸ್ಯೆ ಉಂಟಾಗಿದೆ. ಈ ಕಾರಣದಿಂದ ಅವರಿಗೆ ಚಿಕಿತ್ಸೆ ನೀಡಲು ಮುಂಬೈನ ವೈದ್ಯರ ತಂಡ ಜೋದ್ಪುರಕ್ಕೆ ತೆರಳಿದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ