Select Your Language

Notifications

webdunia
webdunia
webdunia
webdunia

ಬಾಲಿವುಡ್‌ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತೊಬ್ಬ ಆರೋಪಿ ಬಂಧನ

Bollywood actor Salman Khan

Sampriya

ಮುಂಬೈ , ಗುರುವಾರ, 17 ಅಕ್ಟೋಬರ್ 2024 (14:25 IST)
Photo Courtesy X
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಜೂನ್ 1 ರಂದು ಪನ್ವೇಲ್‌ನಲ್ಲಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ನಾಲ್ವರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದರು. ಇದಕ್ಕೂ ಮುನ್ನ ಏಪ್ರಿಲ್‌ನಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟನ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು.

ಹರಿಯಾಣದ ಪಾಣಿಪತ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹರಿಯಾಣ ಮೂಲದ ವ್ಯಕ್ತಿಯಾಗಿದ್ದು ಆತನನ್ನು ನವಿ ಮುಂಬೈಗೆ ಕರೆತರಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.  

ಆರೋಪಿಗಾಗಿ ಕಳೆದ 3 ತಿಂಗಳಿನಿಂದ ಹುಡುಕಾಟ ನಡೆದಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ತನ್ನನ್ನು ಮತ್ತು ಕುಟುಂಬ ಸದಸ್ಯರನ್ನು ಕೊಲ್ಲುವ ಉದ್ದೇಶದಿಂದ ತನ್ನ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಲ್ಮಾನ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು.  

ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಿಲನ ಮೂವೀಗೆ ಅಕ್ಕ ತಂಗಿ ಸೇರಿಸಿದ್ದಾರೆ ಅಷ್ಟೇ..: ಟ್ರೋಲ್ ಆದ ಅಣ್ಣಯ್ಯ ಸೀರಿಯಲ್ ಕತೆ