Publish Date: Sun, 07 Nov 2021 (07:18 IST)
Updated Date: Sun, 07 Nov 2021 (08:13 IST)
ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರಿಗೆ ಇಂದು (ನ.7) ಜನ್ಮದಿನದ ಸಂಭ್ರಮ. ಅವರ ಅಭಿಮಾನಿಗಳಿಗೆ ಇದು ವಿಶೇಷ ದಿನ.
ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಸಖತ್ ಬ್ಯೂಸಿ ಆಗಿರುವ ಅನುಷ್ಕಾ ಮೇಲೆ ಫ್ಯಾನ್ಸ್ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅರುಂಧತಿ, ಬಾಹುಬಲಿ ರೀತಿಯ ಬ್ಲಾಕ್ಬಸ್ಟರ್ ಸಿನಿಮಾಗಳನ್ನು ನೀಡಿದ ಅವರಿಗೆ ಇತ್ತೀಚಿನ ದಿನಗಳಲ್ಲಿ ಯಾಕೋ ದೊಡ್ಡ ಮಟ್ಟದ ಯಶಸ್ಸು ಸಿಗುತ್ತಿಲ್ಲ. ಇಂದು ಅನುಷ್ಕಾ ಶೆಟ್ಟಿ ಅವರ 40ನೇ ವರ್ಷದ ಜನ್ಮದಿನದ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್ ಆಗುವ ಸಾಧ್ಯತೆ ಇದೆ.
ಸೋಶಿಯಲ್ ಮೀಡಿಯಾದಲ್ಲಿ ಒಂದು ದಿನ ಮೊದಲೇ ಸೆಲೆಬ್ರೇಷನ್ ಶುರುವಾಗಿತ್ತು. ಕಾಮನ್ ಡಿಪಿ ಶೇರ್ ಮಾಡಿಕೊಳ್ಳುತ್ತಿರುವ ಅಭಿಮಾನಿಗಳು ಅನುಷ್ಕಾಗೆ ಶುಭಾಶಯ ಕೋರುತ್ತಿದ್ದಾರೆ. 2020ರಲ್ಲಿ ನೇರವಾಗಿ ಅಮೇಜಾನ್ ಪ್ರೈಂ ವಿಡಿಯೋ ಮೂಲಕ ತೆರೆಕಂಡ ನಿಶಬ್ದಂ ಸಿನಿಮಾ ಬಳಿಕ ಅನುಷ್ಕಾ ಬೇರೆ ಯಾವುದೇ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಹೊಸ ಪ್ರಾಜೆಕ್ಟ್ಗಳ ಬಗ್ಗೆ ಅಪ್ಡೇಟ್ ಸಿಗುವ ನಿರೀಕ್ಷೆ ಇದೆ.