Webdunia - Bharat's app for daily news and videos

Install App

29 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಎಆರ್ ರೆಹಮಾನ್

Krishnaveni K
ಬುಧವಾರ, 20 ನವೆಂಬರ್ 2024 (09:42 IST)
Photo Credit: X
ಮುಂಬೈ: ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಮತ್ತು ಪತ್ನಿ ಸಾಯಿರಾ ಬಾನು ವಿಚ್ಛೇದನ ಪಡೆದುಕೊಳ್ಳುತ್ತಿದ್ದು ತಮ್ಮ 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲು ತೀರ್ಮಾನಿಸಿದ್ದಾರೆ.

ಸಾಯಿರಾ ಬಾನು ಪರ ವಕೀಲ ವಂದನಾ ಶಾ ಈ ವಿಚಾರವನ್ನು ಖಿಚಿತಪಡಿಸಿದ್ದಾರೆ. 1995 ರಲ್ಲಿ ಎಆರ್ ರೆಹಮಾನ್ ಮತ್ತು ಸಾಯಿರಾ ಬಾನು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳೂ ಇದ್ದಾರೆ. ಇದೀಗ ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ತೀರ್ಮಾನಿಸಿದ್ದಾರೆ.

ಮದುವೆಯಾಗಿ ಇಷ್ಟು ವರ್ಷಗಳ ನಂತರ ಸಾಯಿರಾ ತಮ್ಮ ಪತಿ ಎಆರ್ ರೆಹಮಾನ್ ರಿಂದ ಬೇರ್ಪಡುವ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ. ಈ ನಿರ್ಧಾರವನ್ನು ಅವರು ಸಾಕಷ್ಟು ಭಾವನಾತ್ಮಕ ಒತ್ತಡದ ನಂತರ ತೆಗೆದುಕೊಂಡಿದ್ದಾರೆ. ಒಬ್ಬರಿಗೊಬ್ಬರ ಪ್ರೀತಿಗಿಂತ ವಿರಸದ ಅಂತರವೇ ಹೆಚ್ಚಾಗಿದೆ. ಹೀಗಾಗಿ ಸಾಯಿರಾ ನೋವು ಮತ್ತು ದುಃಖದಿಂದಲೇ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವಂದನಾ ಶಾ ಹೇಳಿದ್ದಾರೆ.

ಈ ಬಗ್ಗೆ ಎಆರ್ ರೆಹಮಾನ್ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನಾವು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸಿದೆವು. ಆದರೆ ಅದು ಎಲ್ಲವೂ ನಿಷ್ಫಲವಾಯಿತು ಎಂದು ಹೇಳಿಕೊಂಡಿದ್ದಾರೆ. ಇನ್ನು ಸಂಗೀತ ಮಾಂತ್ರಿಕನ ವಿಚ್ಛೇದನ ವಿಚಾರದ ಬಗ್ಗೆ ನೆಟ್ಟಿಗರು ಕಾಮೆಂಟ್ ಮಾಡಿದ್ದು ಬೆಳ್ಳಂ ಬೆಳಿಗ್ಗೆ ಎಂಥಾ ಸುದ್ದಿ ಕೇಳಿದೆವು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments