ಮುಂಬೈ: ವಿವಾದಾತ್ಮಕ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಮಹರ್ಷಿ ವಾಲ್ಮೀಕಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಕ್ಕೆ ವಾರಂಟ್ ಹೊರಡಿಸಲಾಗಿದೆ.
ರಾಮಾಯಣ ಕರ್ತೃ ವಾಲ್ಮೀಕಿ ಮಹರ್ಷಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಲುಧಿಯಾನಾ ಕೋರ್ಟ್ ಬಂಧನ ವಾರಂಟ್ ಹೊರಡಿಸಿದೆ. ಖಾಸಗಿ ವಾಹಿನಿಯೊಂದರಲ್ಲಿ ನೀಡಿದ ಹೇಳಿಕೆ ಆಧರಿಸಿ ರಾಖಿ ವಿರುದ್ಧ ದೂರು ದಾಖಲಾಗಿತ್ತು.
ವಾಲ್ಮೀಕಿ ಸಮುದಾಯವನ್ನೇ ರಾಖಿ ಅವಹೇಳನ ಮಾಡಿದ್ದಾರೆ ಎಂದು ದೂರುದಾರರು ಆಪಾದಿಸಿದ್ದರು. ಈ ಬಗ್ಗೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದರೂ, ರಾಖಿ ಸ್ಪಂದಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಬಂಧನ ವಾರಂಟ್ ಹೊರಡಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ