Publish Date: Wed, 20 Oct 2021 (16:16 IST)
Updated Date: Wed, 20 Oct 2021 (16:17 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಸಿಲುಕಿಕೊಂಡು ನ್ಯಾಯಾಂಗ ಬಂಧನದಲ್ಲಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಕೋರ್ಟ್ ತಿರಸ್ಕರಿಸಿದೆ.
ಕಳೆದ ವಾರ ವಿಚಾರಣೆ ಪೂರ್ತಿಗೊಳಿಸಿದ್ದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಇದುವರೆಗೆ 18 ದಿನಗಳ ನ್ಯಾಯಾಂಗ ಬಂಧನ ಅನುಭವಿಸಿರುವ ಶಾರುಖ್ ಪುತ್ರ ಇಂದು ಜಾಮೀನು ಸಿಕ್ಕು ಹೊರಬರಬಹುದು ಎಂಬ ನಿರೀಕ್ಷೆಯಲ್ಲಿದ್ದರು.
ಆದರೆ ಕೋರ್ಟ್ ಆರ್ಯನ್ ಮತ್ತು ಇತರರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅವರೀಗ ಆರ್ಥರ್ ಜೈಲಿನಲ್ಲಿ ಬಂಧನದಲ್ಲಿದ್ದಾರೆ.