Webdunia - Bharat's app for daily news and videos

Install App

ಸಲ್ಮಾನ್ ಖಾನ್ ವಿರುದ್ಧ ಕೇಸ್ ದಾಖಲಿಸಿದ ಜುಬೇರ್ ಖಾನ್

Webdunia
ಸೋಮವಾರ, 9 ಅಕ್ಟೋಬರ್ 2017 (17:41 IST)
ಮುಂಬೈ: ವಿವಾದಗಳಿಂದಲೇ ಸುದ್ದಿಯಾಗುತ್ತಿದೆ ಹಿಂದಿಯ ಬಿಗ್ ಬಾಸ್ ರಿಯಾಲಿಟಿ ಶೋ. ಅದೇ ರೀತಿ ಸೀಸನ್ 11 ಶುರುವಾದಾಗಿನಿಂದ ಸಾಕಷ್ಟು ಕುತೂಹಲಕಾರಿ ಟ್ವಿಸ್ಟ್ ಮತ್ತು ಟರ್ನ್ ಪಡೆದುಕೊಳ್ಳುತ್ತಿದೆ.

ಸದ್ಯ ಎವಿಕ್ಟ್ ಆಗಿದ್ದ ಸ್ಪರ್ಧಿ ಜುಬೇರ್ ಖಾನ್, ಬಿಗ್ ಬಾಸ್ ಸೀಸನ್ 11 ಹೋಸ್ಟ್ ಸಲ್ಮಾನ್ ಖಾನ್ ವಿರುದ್ಧ ಲೋನವಾಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಗ್ ಬಾಸ್ ನ ಮೊದಲ ವಾರದ `ವೀಕೆಂಡ್ ಕಾ ವಾರ್’ನಲ್ಲಿ ಸಲ್ಮಾನ್ ಖಾನ್ ತಮಗೆ ಬೆದರಿಕೆ ಹಾಕಿದ್ದಾರೆ. “I will make you my dog. Will see you after you leave the home” ಎಂದು ಹೇಳಿದ್ದಾರೆಂದು ಜುಬೇರ್ ಖಾನ್ ಆರೋಪಿಸಿದ್ದಾರೆ.

ಶೋನಲ್ಲಿ ಜುಬೇರ್, ಮಹಿಳಾ ಸ್ಪರ್ಧಿಗಳು ಮತ್ತು ಸಹ ಸ್ಪರ್ಧಿಗಳ ಬಗ್ಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಕೆಟ್ಟ ಪದ ಬಳಸಿದ್ದರು. ಇದರಿಂದ ತಮ್ಮ ತಾಳ್ಮೆ ಕಳೆದುಕೊಂಡಿದ್ದ ಸಲ್ಮಾನ್, ಜುಬೇರ್ ಗೆ ತರಾಟೆ ತೆಗೆದುಕೊಂಡಿದ್ದರು.

ಜುಬೇರ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಂಬಂಧಿ ಎಂದು ಹೇಳಲಾಗಿದೆ. ಭಾನುವಾರ ಬೆಳಗ್ಗೆ ಅನಾರೋಗ್ಯ ಕಾರಣದಿಂದ ಕನ್ಫೆಷನ್ ರೂಮಿಗೆ ಕರೆಯಿಸಿ ನಂತರ ವೈದ್ಯರ ಬಳಿ ಕಳುಹಿಸಲಾಗಿತ್ತು. ಎಪಿಸೋಡ್ ಕೊನೆಯಲ್ಲಿ ಜುಬೇರ್ ಚೇತರಿಸಿಕೊಂಡಿದ್ದು, ಕಡಿಮೆ ವೋಟ್ ಗಳಿಸಿರುವ ಹಿನ್ನೆಲೆಯಲ್ಲಿ ಅವರನ್ನು ಎವಿಕ್ಟ್ ಮಾಡಲಾಗಿದೆ ಎಂದು ಸಲ್ಮಾನ್ ಖಾನ್ ಅನೌನ್ಸ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments