Webdunia - Bharat's app for daily news and videos

Install App

ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ಈ ನಿರ್ಧಾರ ಅಭಿಮಾನಿಗಳಿಗೆ ಬೇಸರ ತರಿಸಿದೆಯಂತೆ!

Webdunia
ಬುಧವಾರ, 31 ಜನವರಿ 2018 (06:28 IST)
ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಐತಿಹಾಸಿಕ ಸಿನಿಮಾಗಳಲ್ಲಿ ನಟಿಸುತ್ತಾ ತನ್ನದೇ ಚಾಪು ಮೂಡಿಸಿರುವ ನಟಿ ದೀಪಿಕಾ ಪಡುಕೋಣೆ ಅವರು ಈಗ ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸುವ ವಿಷಯವೊಂದನ್ನು ಹೇಳಿದ್ದಾರೆ.

 
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನೀವು ಮುಂದಿನ ದಿನಗಳಲ್ಲಿಯೂ ಐತಿಹಾಸಿಕ ಸಿನಿಮಾದಲ್ಲಿ ನಟಿಸಲು ಇಷ್ಟಪಡ್ತೀರಾ ಅಂತಾ ಕೇಳಿದಾಗ, ಇಷ್ಟೆಲ್ಲಾ ಆದ ಮೇಲೆಯೂ ಮತ್ತೆ ಐತಿಹಾಸಿಕ ಚಿತ್ರಗಳಲ್ಲಿ ನಟಿಸಲ್ಲ ಅಂತಾ ದೀಪಿಕಾ ಅವರು ಖಡಕ್ ಆಗಿ ಹೇಳಿದ್ದಾರೆ.


ದೀಪಿಕಾ ಪಡುಕೋಣೆ ನಟಿಸಿರುವ ಐತಿಹಾಸಿಕ ಕಥೆಯನ್ನು ಹೊಂದಿರುವ ‘ಪದ್ಮಾವತ್’ ಸಿನಿಮಾ ಬಿಡುಗಡೆಗೆ  ಸಂಬಂಧಿಸಿದಂತೆ ಅನೇಕ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಈ ಹಿಂದೆ ದೀಪಿಕಾ ಪಡುಕೋಣೆ ನಟಿಸಿದ್ದ ಐತಿಹಾಸಿಕ ಕಥೆಯನ್ನು ಹೊಂದಿದ್ದ ‘ಬಾಜೀರಾವ್ ಮಸ್ತಾನಿ’ ಚಿತ್ರೀಕರಣ ಬಿಡುಗಡೆ ವೇಳೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದವು. ಈ ಎಲ್ಲ ಕಾರಣಗಳಿಂದ ದೀಪಿಕಾ ಮುಂದಿನ ದಿನಗಳಲ್ಲಿ ಐತಿಹಾಸಿಕ ಸಿನಿಮಾದಲ್ಲಿ ನಟಿಸಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments