ಬಾಲಿವುಡ್ ನ ನಟ ಅಮಿತಾಬ್ ಬಚ್ಚನ್ ಅವರು ಆಫ್ರೋಜ್ ಶಾ ಅವರಿಗೆ ನೀಡಿದ ಉಡುಗೊರೆ ಏನು ಗೊತ್ತಾ...?

Webdunia
ಮಂಗಳವಾರ, 2 ಜನವರಿ 2018 (07:34 IST)
ಮುಂಬೈ : ಬಾಲಿವುಡ್ ನ ನಟ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಪರಿಸರವಾದಿ ಆಫ್ರೋಜ್ ಶಾ ಅವರಿಗೆ ಟ್ರ್ಯಾಕ್ಟರ್ ಹಾಗೂ ಟ್ರ್ಯಾಕ್ಟರ್ ಮಾದರಿಯ ಜೆಸಿಬಿ ಯಂತ್ರವನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ.

 
ಆಫ್ರೋಜ್ ಶಾ ಅವರು ಮುಂಬೈನ ವೆರ್ಸೋವಾ ಬೀಚ್ ಸ್ವಚ್ಛತೆ ಕಾರ್ಯ ಮಾಡುತ್ತಿದ್ದರು. ಪ್ರಧಾನಿ ಮೋದಿ ಅವರ ಸ್ವಚ್ಚ ಭಾರತ ಅಭಿಯಾನಕ್ಕೆ ಬೆಂಬಲಿಗರಾಗಿರುವ  ಬಿಗ್ ಬಿ ಅವರು ಬೀಚ್ ಸ್ವಚ್ಛತೆ ಕಾರ್ಯದ ಸ್ಥಳಕ್ಕೆ ಭೇಟಿ ನೀಡಿ, ಆಫ್ರೋಜ್ ಶಾ ಅವರಿಗೆ ಟ್ರ್ಯಾಕ್ಟರ್ ಹಾಗೂ ಟ್ರ್ಯಾಕ್ಟರ್ ಮಾದರಿಯ ಜೆಸಿಬಿ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ.

 
‘ಟ್ರ್ಯಾಕ್ಟರ್ ಹಾಗೂ ಟ್ರ್ಯಾಕ್ಟರ್ ಮಾದರಿಯ ಜೆಸಿಬಿ ಯಂತ್ರವನ್ನು ಆಫ್ರೋಜ್ ಶಾ ಅವರಿಗೆ ನೀಡಿದ್ದು ಸಂತಸ ತಂದಿದೆ. ನನ್ನ ಜೀವನದ ಅತ್ಯಂತ ತೃಪ್ತಿಕರ ಅನುಭವ’ ಎಂದು ಬಿಗ್ ಬಿ ಟ್ವೀಟ್ ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ಸಾಮಾಜಿಕ ತಾಣಗಳಲ್ಲಿ ಆಫ್ರೋಜ್ ಶಾ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments