ಮುಂಬೈ: ಬಾಲಿವುಡ್ ನಟ ಗೋವಿಂದ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದು ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯ ನಟ ಧರ್ಮೇಂದ್ರ ಬಳಿಕ ಬಾಲಿವುಡ್ ಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.
ನಿನ್ನೆಯಷ್ಟೇ ನಟ ಧರ್ಮೇಂದ್ರ ಆರೋಗ್ಯ ತೀವ್ರ ಹದಗೆಟ್ಟಿರುವುದಾಗಿ ವರದಿಯಾಗಿತ್ತು. ಅವರನ್ನು ನೋಡಲು ಗೋವಿಂದ ನಿನ್ನೆ ಆಸ್ಪತ್ರೆಗೆ ಹೋಗಿದ್ದರು. ಆದರೆ ಇಂದು ಸ್ವತಃ ಗೋವಿಂದ ಅವರೇ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸುದ್ದಿ ಬಂದಿದೆ.
ಸದ್ಯಕ್ಕೆ ಗೋವಿಂದ ಅವರನ್ನು ಜುಹುವಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಅವರು ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಸದ್ಯಕ್ಕೆ ವಿವಿಧ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಎಮರ್ಜೆನ್ಸಿ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಗೋವಿಂದ ಅವರಿಗೆ ಏನಾಗಿದೆ ಎಂದು ಸ್ಪಷ್ಟವಾಗಿ ತಿಳಿದುಬರಲಿದೆ. ಕಳೆದ ವರ್ಷವೂ ಇದೇ ಸಮಯದಲ್ಲಿ ಗೋವಿಂದಗೆ ಗನ್ ಮಿಸ್ ಫೈಯರ್ ಆಗಿ ಗಾಯವಾಗಿತ್ತು. ಈ ವರ್ಷ ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ಸೇರುವಂತಾಗಿದೆ.