ಮುಂಬೈ : ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಾಲಕನ ಜೊತೆ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವಾಗ ಅಪಘಾತ ಸಂಭವಿಸಿದ್ದು, ಸದ್ಯ ರಣವೀರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ನಟಿ ದೀಪಿಕಾ ಪಡುಕೋಣೆ ಅವರು ಕೋಪಗೊಂಡು ಅಪಘಾತಕ್ಕೆ ಕಾರಣನಾದ ಕಾರು ಚಾಲಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.
ನಟ ರಣವೀರ್ ಸಿಂಗ್ ಅವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಗುದ್ದಿದಾಗ ಹಿಂದಿನಿಂದ ಬಂದ ಮತ್ತೊಂದು ಕಾರು ರಣವೀರ್ ಅವರ ಕಾರಿಗೆ ಗುದ್ದಿತ್ತು. ಈ ಅಪಘಾತದಲ್ಲಿ ಸದ್ಯ ರಣವೀರ್ ಸಿಂಗ್ ಅವರಿಗೆ ಯಾವುದೇ ಹಾನಿಯಾಗದೆ ಬಚಾವ್ ಆಗಿದ್ದಾರೆ. ಈ ಸುದ್ದಿ ತಿಳಿದ ನಟಿ ದೀಪಿಕಾ ಪಡುಕೋಣೆ ಅವರು ಕಾರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಕೆಲಸದಿಂದ ತೆಗೆದು ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ