ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಇಂದು ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದರು. ಜಾಕ್ವೆಲಿನ್ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸಂತಾಪ ಸೂಚಿಸುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ, ಜಾಕ್ವೆಲಿನ್ ಅವರ ತಾಯಿ ಚಿಕಿತ್ಸೆ ಪಡೆಯುತ್ತಿದ್ದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದರು. ಹೃದಯಾಘಾತಕ್ಕೊಳಗಾದ ಕಿಮ್ ಅವವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು.
ಜಾಕ್ವೆಲಿನ್ ಅವರ ತಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಲ್ಲಿ ಈ ಹಿಂದೆ ಹೇಳಲಾಗಿತ್ತು.
ಮಾರ್ಚ್ 26 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ನಟಿ ಪ್ರದರ್ಶನ ನೀಡಬೇಕಾಗಿತ್ತು. ಆದಾಗ್ಯೂ, ಈ ಕಷ್ಟದ ಸಮಯದಲ್ಲಿ ತನ್ನ ಕುಟುಂಬಕ್ಕೆ ಆದ್ಯತೆ ನೀಡುವ ಸಲುವಾಗಿ ಅವರು ಕಾರ್ಯಕ್ರಮದಿಂದ ಹಿಂದೆ ಸರಿದಿದ್ದರು.
ಇದೀಗ ಅವರ ತಾಯಿ ನಿಧನರಾಗಿದ್ದಾರೆ. ಜಾಕ್ವೆಲಿನ್ ಆಪ್ತ ವಲಯದವರು ಕಿಮ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.