ಕುಕ್ಕೆಯಲ್ಲಿ ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್‌

Sampriya
ಮಂಗಳವಾರ, 11 ಮಾರ್ಚ್ 2025 (19:00 IST)
Photo Courtesy X
ಮಂಗಳೂರು: ಈಚೆಗೆ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಇಂದು ದಕ್ಷಿಣ ಕನ್ನಡದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ತನ್ನ ಸ್ನೇಹಿತೆಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಕತ್ರಿನಾ, ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.

ಮಂಗಳವಾರ ಮತ್ತು ಬುಧವಾರದಂದು ತಲಾ ನಾಲ್ಕರಿಂದ ಐದು ಗಂಟೆಗಳ ಕಾಲ ಎರಡು ಹಂತಗಳಲ್ಲಿ ಪೂಜೆಯನ್ನು ನಡೆಸಲಾಗುತ್ತದೆ.

ದೇವಸ್ಥಾನದ ವಿಐಪಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿರುವ ಕತ್ರಿನಾ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಧಾರ್ಮಿಕ ಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments