Webdunia - Bharat's app for daily news and videos

Install App

ಪ್ರಧಾನಿ ಮೋದಿಯಿಂದಾಗಿ ವಿವಾಹ ಸ್ಥಳವನ್ನೇ ಬದಲಾಯಿಸಿದ ಬಾಲಿವುಡ್ ಜೋಡಿ

Krishnaveni K
ಗುರುವಾರ, 1 ಫೆಬ್ರವರಿ 2024 (10:57 IST)
ಮುಂಬೈ: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಬಾಲಿವುಡ್ ತಾರೆಯರಾದ ರಾಕುಲ್ ಪ್ರೀತ್ ಸಿಂಗ್ ಮತ್ತು ಜ್ಯಾಕೀ ಭಗ್ನಾನಿ ತಮ್ಮ ಮದುವೆ ಸ್ಥಳವನ್ನೇ ಬದಲಾಯಿಸಿದರಾ? ಹೀಗೊಂದು ಸುದ್ದಿ ಹಬ್ಬಿದೆ.

ದೇ ದೇ ಪ್ಯಾರ್ ಖ್ಯಾತಿಯ ನಟಿ ರಾಕುಲ್ ಪ್ರೀತ್ ಸಿಂಗ್ ಮತ್ತು ನಿರ್ಮಾಪಕ, ನಟ ಜ್ಯಾಕೀ ಭಗ್ನಾನಿ ಫೆಬ್ರವರಿ 21 ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮೊದಲು ಈ ತಾರಾ ಜೋಡಿ ವಿದೇಶದಲ್ಲಿ ಮದುವೆಯಾಗಲು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ ಇದೀಗ ದಿಡೀರ್ ಆಗಿ ಗೋವಾದಲ್ಲಿ ಮದುವೆಯಾಗಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ದಿಡೀರ್ ಲೊಕೇಷನ್ ಬದಲಾಗಿದ್ದು ಹೇಗೆ?
ಮದುವೆಗೆ ಕೆಲವೇ ದಿನಗಳ ಮೊದಲು ಈ ಜೋಡಿ ತಮ್ಮ ಮದುವೆ ಸ್ಥಳವನ್ನು ಬದಲಾಯಿಸಿದೆ. ಇದಕ್ಕೆ ಕಾರಣ ಪ್ರಧಾನಿ ಮೋದಿಯವರು ಇತ್ತೀಚೆಗೆ ಮಾಡಿದ್ದ ಮನವಿ ಕಾರಣ ಎನ್ನಲಾಗಿದೆ. ಇತ್ತೀಚೆಗೆ ಮೋದಿ ಶ್ರೀಮಂತ ಜೋಡಿಗಳು ವಿದೇಶಗಳಲ್ಲಿ ಮದುವೆಯಾಗುವ ಬದಲು ತಮ್ಮ ಭಾರತದಲ್ಲೇ ಮದುವೆ ಕಾರ್ಯಕ್ರಮ ಇಟ್ಟುಕೊಳ್ಳಿ. ಇದರಿಂದ ಇಲ್ಲಿನವರಿಗೆ ಉದ್ಯೋಗ ಸಿಕ್ಕಂತಾಗುತ್ತದೆ. ನಮ್ಮ ಉದ್ಯಮ ಬೆಳೆಯುತ್ತದೆ ಎಂದು ಕರೆಕೊಟ್ಟಿದ್ದರು.  ಇದೀಗ ಪ್ರಧಾನಿ ಮೋದಿಯವರ ಕರೆಯಿಂದ ಪ್ರಭಾವಿತರಾಗಿ ಇಬ್ಬರೂ ಭಾರತದಲ್ಲೇ ಮದುವೆಯಾಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಇಬ್ಬರೂ ತಮ್ಮ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಫೆಬ್ರವರಿ 21 ರಂದು ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ಸಿನಿ ಸ್ನೇಹಿತರೂ ಹಾಜರಾಗಲಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್ ನಲ್ಲಿದ್ದ ಜೋಡಿ ಈಗ ವೈವಾಹಿಕ ಜೀವನಕ್ಕೆ ಕಾಲಿಡಲು ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments