Daily Horoscope

Select Your Language

Notifications

webdunia
webdunia
webdunia
webdunia

ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನ ಖ್ಯಾತ ಡಾನ್ಸರ್ ಅಭಿಜಿತ್ ಶಿಂಧೆ

ಮುಂಬೈ
ಮುಂಬೈ : ಬಾಲಿವುಡ್ ಚಿತ್ರರಂಗದ ಖ್ಯಾತ ಡಾನ್ಸರ್ ಅಭಿಜಿತ್ ಶಿಂಧೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಅಭಿಜಿತ್ ಶಿಂಧೆ ಅವರ ಮೃತದೇಹ  ಮುಂಬೈನ  ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಲಿವುಡ್ ನ ಖ್ಯಾತ ನಟರಾದ ರಣವೀರ್ ಸಿಂಗ್, ರಣಬೀರ್ ಕಪೂರ್ ಸೇರಿದಂತೆ ಬಾಲಿವುಡ್ ನ ಹಲವು ಖ್ಯಾತನಟರ ಚಿತ್ರಗಳಲ್ಲಿ ಅಭಿಜಿತ್ ಶಿಂಧೆ ಕೆಲಸ ಮಾಡಿದ್ದರು.


ಖಿನ್ನತೆಯಿಂದ ಬಳಲುತ್ತಿದ್ದ ಅಭಿಜಿತ್ ಶಿಂಧೆ ಕೆಲ ದಿನಗಳಿಂದ ಕುಟುಂಬದಿಂದ ದೂರವಾಗಿ, ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗು ಮರು ನಿರ್ಮಾಣಕ್ಕೆ ನಟ ರವಿಚಂದ್ರನ್ ನೀಡಿದ 10 ಐಡಿಯಾಗಳಾವುವು ಗೊತ್ತಾ?