ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು 89 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಪಂಜಾಬ್ ಮೂಲದವರಾಗಿದ್ದ ಧರ್ಮೇಂದ್ರ 60 ರ ದಶಕದಲ್ಲಿ ಚಿತ್ರರರಂಗಕ್ಕೆ ಬಂದು ಬಾಲಿವುಡ್ ನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಬಳಿಕ ನಿರ್ಮಾಪಕನಾಗಿಯೂ ಗುರುತಿಸಿಕೊಂಡವರು. ಒಂದು ಕಾಲದಲ್ಲಿ ಚಿತ್ರರಂಗವನ್ನು ಅಕ್ಷರಶಃ ರೂಲ್ ಮಾಡಿ ಹೀರೋ ಸ್ಪುರದ್ರೂಪಿ ಹೀರೋ ಅವರು.
ಇತ್ತೀಚೆಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಮನೆಯಲ್ಲಿಯೇ ಚಿಕಿತ್ಸೆ ಕೊಡಿಸುವುದಾಗಿ ಕುಟುಂಬಸ್ಥರು ಅವರನ್ನು ಮನೆಗೆ ಕರೆದೊಯ್ದಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅವರ ಅಂತ್ಯ ಸಂಸ್ಕಾರಕ್ಕೆ ಮುಂಬೈನ ವಿಲೇ ಪಾರ್ಲೆ ಸ್ಮಶಾನದಲ್ಲಿ ನಡೆಯಲಿದೆ. ಈಗಾಗಲೇ ಕುಟುಂಬಸ್ಥರು ಇಲ್ಲಿಗೆ ಬಂದು ಸಿದ್ಧತೆ ನಡೆಸುತ್ತಿದ್ದಾರೆ. ಅವರ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿಯುತ್ತಿದೆ.