ಮುಂಬೈ : ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ನಟಿ ಶಿಲ್ಪಾಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈನ ಪೊಲೀಸರು ಬಂಧಿಸಿದ್ದರು. ಇಂತಹ ಅವರಿಗೆ ನಿನ್ನೆ ಮುಂಬೈ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಇಂದು ನ್ಯಾಯಾಲಯದಿಂದ ಬಿಡುಗಡೆಗೊಳಿಸಲಾಗಿದೆ.
ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಜೈಲು ಸೇರಿದ್ದರು. ಈ ಪ್ರಕರಣ ಸಂಬಂಧ ಮುಂಬೈ ನ್ಯಾಯಾಲಯದಲ್ಲಿ ಸಲ್ಲಿ ಸಲ್ಲಿಕೆಯಾಗಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್, ನಿನ್ನೆ 50 ಸಾವಿರ ಬಾಂಡ್ ನೋಂದಿಗೆ ಜಾಮೀನು ನೀಡಿತ್ತು. ಹೀಗಾಗಿ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಇದೀಗ ಬಿಡುಗಡೆಯಾಗಿದ್ದಾರೆ.