Webdunia - Bharat's app for daily news and videos

Install App

ಇದೇ 27ರಂದು ಸಂಸತ್‌ನಲ್ಲಿ ಛಾವಾ ಸಿನಿಮಾ ಪ್ರದರ್ಶನ: ಮೋದಿ, ಸಚಿವರಿಂದ ವೀಕ್ಷಣೆ

Sampriya
ಮಂಗಳವಾರ, 25 ಮಾರ್ಚ್ 2025 (16:35 IST)
Photo Courtesy X
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ ನಟ ವಿಕ್ಕಿ ಕೌಶಲ್ ಅಭಿನಯದ ಛಾವಾ ಸಿನಿಮಾವನ್ನು ಇದೇ 27ರಂದು ಸಂಸತ್‌ನಲ್ಲಿ ಪ್ರದರ್ಶನವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಸಂಸತ್ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ವರದಿಯ ಪ್ರಕಾರ, ಸಂಭಾಜಿ ಮಹಾರಾಜ್ ಪಾತ್ರದಲ್ಲಿ ನಟಿಸಿರುವ ನಟ ವಿಕ್ಕಿ ಕೌಶಲ್ ಸೇರಿದಂತೆ ಚಿತ್ರದ ಸಂಪೂರ್ಣ ಪಾತ್ರವರ್ಗ ಮತ್ತು ತಂಡವು ಹಾಜರಿರುತ್ತದೆ.

'ಛಾವಾ' ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಇದು ಈಗಾಗಲೇ ₹500 ಕೋಟಿ ಗಡಿ ದಾಟಿದೆ. ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನವನ್ನು ಆಧರಿಸಿದ ಲಕ್ಷ್ಮಣ್ ಉಟೇಕರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಕ್ಷಯ್ ಖನ್ನಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಮೈಲಿಗಲ್ಲಿನೊಂದಿಗೆ, ಛಾವಾ ವಿಕ್ಕಿ ಕೌಶಲ್ ಅವರ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿದ್ದು, ಅವರ ಹಿಂದಿನ ಬ್ಲಾಕ್‌ಬಸ್ಟರ್‌ಗಳಾದ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್', 'ರಾಝಿ', 'ಸ್ಯಾಮ್ ಬಹದ್ದೂರ್', 'ಜರಾ ಹಟ್ಕೆ ಜರಾ ಬಚ್ಕೆ' ಗಳನ್ನು ಮೀರಿಸಿದೆ.

ಫೆಬ್ರವರಿ ಆರಂಭದಲ್ಲಿ, ನವದೆಹಲಿಯಲ್ಲಿ ನಡೆದ 98 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಛಾವಾ ಚಿತ್ರದ ಯಶಸ್ಸನ್ನು ಗುರುತಿಸಿ, ಚಿತ್ರವನ್ನು ಶ್ಲಾಘಿಸಿದರು.

 "ಮಹಾರಾಷ್ಟ್ರ ಮತ್ತು ಮುಂಬೈ ಮರಾಠಿ ಮತ್ತು ಹಿಂದಿ ಸಿನಿಮಾ ಎರಡನ್ನೂ ಹೊಸ ಎತ್ತರಕ್ಕೆ ಏರಿಸಿವೆ. ಇತ್ತೀಚಿನ ದಿನಗಳಲ್ಲಿ, ಛಾವಾ ದೇಶಾದ್ಯಂತ ಅಲೆಗಳನ್ನು ಸೃಷ್ಟಿಸುತ್ತಿದೆ (ಇನ್ ಡಿನೋ ಟು ಛಾವಾ ಕಿ ಧೂಮ್ ಮಚಿ ಹುಯಿ ಹೈ). ಈ ರೂಪದಲ್ಲಿ ಸಂಭಾಜಿ ಮಹಾರಾಜರ ಧೈರ್ಯದ ಚಿತ್ರಣವು ಶಿವಾಜಿ ಸಾವಂತ್ ಅವರ ಮರಾಠಿ ಕಾದಂಬರಿಯಿಂದ ಪ್ರೇರಿತವಾಗಿದೆ."



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments