ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಆಲಿಯಾ ಭಟ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾನು ಏನು ಎಂಬುದನ್ನು ಪದೇಪದೇ ಕೂಗಿ ಹೇಳಲು ಸಾಧ್ಯವಿಲ್ಲ. ನಿಮಗೆ ನಾನು ಇಷ್ಟ ಎಲ್ಲ ಎಂದಾದರೆ ನನ್ನನ್ನು ನೋಡಬೇಡಿ ಎಂದು ಆಲಿಯಾ ಭಟ್ ಹೇಳಿದ್ದಾರೆ. ಈ ಮೊದಲು ಕರೀನಾ ಕಪೂರ್ ಖಾನ್ ಕೂಡ ಇದೇ ರೀತಿ ಹೇಳಿಕೆ ನೀಡಿ ಟ್ರೋಲ್ಗೆ ಒಳಗಾಗಿದ್ದರು. ಈಗ ಆಲಿಯಾ ಭಟ್ ಅವರನ್ನು ಜನರು ಕಮೆಂಟ್ಗಳ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.ಎಷ್ಟು ದರ್ಪದಿಂದ ಆಲಿಯಾ ಭಟ್ ಈ ರೀತಿ ಹೇಳಿದ್ದಾರೆ ನೋಡಿ. ಅವರು ಹೇಳಿದನ್ನು ನಾವು ಸವಾಲು ಅಂತ ಸ್ವೀಕರಿಸೋಣ. ಬ್ರಹ್ಮಾಸ್ತ್ರ ಸಿನಿಮಾವನ್ನು ಬಹಿಷ್ಕರಿಸೋಣ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿರುವಾಗ ಆಲಿಯಾ ಇಂಥ ಹೇಳಿಕೆ ನೀಡಬಾರದಿತ್ತು ಎಂದು ಜನರು ಅಭಿಪ್ರಾಯ ಪಟ್ಟಿದ್ದಾರೆ.