ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಮುಡಿಗೇರಿದ ಕ್ರಿಸ್ಟಲ್ ಪ್ರಶಸ್ತಿ

ಮಂಗಳವಾರ, 21 ಜನವರಿ 2020 (20:30 IST)
ವಿಶ್ವ ಆರ್ಥಿಕ ವೇದಿಕೆಯ ಪ್ರತಿಷ್ಠಿತ ಕ್ರಿಸ್ಟಲ್ ಪ್ರಶಸ್ತಿ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಮುಡಿಗೇರಿದೆ.

ಜೆಎನ್ ಯು ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿವಾದಕ್ಕೆ ಒಳಗಾಗಿದ್ದ ನಟಿ ದೀಪಿಕಾ ಪಡುಕೋಣೆ ಮತ್ತೆ ಸುದ್ದಿಯಾಗಿದ್ದಾರೆ.

ದಾವೋಸ್ ನಲ್ಲಿ ನಡೆದ ಸಮಾರಂಭದಲ್ಲಿ ವಿಶ್ವ ಆರ್ಥಿಕ ವೇದಿಕೆಯಿಂದ ಕೊಡಮಾಡುವ ಕ್ರಿಸ್ಟಲ್ ಪ್ರಶಸ್ತಿಯನ್ನು ನಟಿ ದೀಪಿಕಾ ಪಡುಕೋಣೆ ಪಡೆದುಕೊಂಡಿದ್ದಾರೆ.

ಮಾನಸಿಕ ಆರೋಗ್ಯದ ಕುರಿತಾಗಿ ಜನ ಜಾಗೃತಿ ಮೂಡಿಸುವಲ್ಲಿ ನಟಿ ದೀಪಿಕಾ ತೊಡಗಿಕೊಂಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಟೆಂಪಲ್ ರನ್ ಮಾಡಿದ ನಟಿ ರಚಿತಾ ರಾಮ್