Webdunia - Bharat's app for daily news and videos

Install App

ದೀಪಿಕಾ ಪಡುಕೋಣೆ ಈಗ 2 ತಿಂಗಳ ಗರ್ಭಿಣಿ: ಸಿಹಿ ಸುದ್ದಿ ನೀಡಿದ ರಣವೀರ್ ಸಿಂಗ್

Krishnaveni K
ಗುರುವಾರ, 29 ಫೆಬ್ರವರಿ 2024 (10:57 IST)
Photo Courtesy: Twitter
ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಪ್ರೆಗ್ನೆನ್ಸಿ ರೂಮರ್ ಕೊನೆಗೂ ನಿಜವಾಗಿದೆ. ದೀಪಿಕಾ ಈಗ ಎರಡು ತಿಂಗಳ ಗರ್ಭಿಣಿ. ಪತಿ ರಣವೀರ್ ಸಿಂಗ್ ಈ ಸಿಹಿ ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಗುವಿನ ಅಂಗಿ, ಶೂ ಇರುವ ಫೋಟೋ ಜೊತೆಗೆ ಸೆಪ್ಟೆಂಬರ್ 2024 ರಲ್ಲಿ ಸಿಹಿ ಸುದ್ದಿ ಎಂದು ರಣವೀರ್ ಸಿಂಗ್ ಪೋಸ್ಟ್ ಮಾಡಿದ್ದಾರೆ. ಅವರ ಈ ಪೋಸ್ಟ್ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಜೊತೆಗೆ ದಂಪತಿಗೆ ಸೆಲೆಬ್ರಿಟಿಗಳು, ಫ್ಯಾನ್ಸ್ ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ದೀಪಿಕಾ ಗರ್ಭಿಣಿ ಎನ್ನುವ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ ಈ ಸುದ್ದಿಯನ್ನು ದಂಪತಿ ಅಲ್ಲಗಳೆದಿರಲಿಲ್ಲ. ಜೊತೆಗೆ ದೀಪಿಕಾ ಇತ್ತೀಚೆಗೆ ಸಾರ್ವಜನಿಕವಾಗಿಯೂ ಅಷ್ಟೊಂದು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಗರ್ಭಿಣಿ ಇರಬಹುದು ಎಂಬ ಊಹಾಪೋಹಗಳಿತ್ತು. ಅದೀಗ ನಿಜವಾಗಿದೆ.

ಮೂಲತಃ ಕನ್ನಡಿಗರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ 2018 ರಲ್ಲಿ ಮದುವೆಯಾಗಿದ್ದರು.  ಇತ್ತೀಚೆಗೆ ದೀಪಿಕಾ ಸಂದರ್ಶನವೊಂದರಲ್ಲಿ ತನಗೆ ಮಗು ಮಾಡಿಕೊಳ್ಳುವ ಯೋಜನೆಯಿದೆ ಎಂದಿದ್ದರು. ಅದರಂತೆ ಇದೀಗ ಮದುವೆಯಾಗಿ ಆರು ವರ್ಷಗಳ ಬಳಿಕ ಮಗು ಬರಮಾಡಿಕೊಳ್ಳುತ್ತಿದ್ದಾರೆ. ಇದೀಗ ದೀಪಿಕಾ ಮತ್ತು ರಣಬೀರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments