Select Your Language

Notifications

webdunia
webdunia
webdunia
webdunia

ದೀಪಿಕಾ ಪಡುಕೋಣೆ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು

ದೀಪಿಕಾ ಪಡುಕೋಣೆ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು
ಬೆಂಗಳೂರು , ಬುಧವಾರ, 5 ಮೇ 2021 (10:49 IST)
ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಅವರ ತಂದೆ, ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಸೇರಿದಂತೆ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ.


ಪ್ರಕಾಶ್ ಪಡುಕೋಣೆ ಅವರಿಗೆ ಸೋಂಕು ತಗುಲಿದ ಬೆನ್ನಲ್ಲೇ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಕಾಶ್ ಪಡುಕೋಣೆ ಪತ್ನಿ, ಇನ್ನೊಬ್ಬ ಪುತ್ರಿಗೂ ಸೋಂಕು ದೃಢಪಟ್ಟಿದೆ.

ಇದೀಗ ದೀಪಿಕಾಗೂ ಸೋಂಕು ತಗುಲಿರುವುದು ಖಚಿತವಾಗಿದೆ. ದೀಪಿಕಾ ಕೂಡಾ ಈಗ ತಮ್ಮ ಕುಟುಂಬದವರ ಜೊತೆಗೆ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ರಣವೀರ್ ಸಿಂಗ್ ಕೂಡಾ ಸಂಕಷ್ಟದ ಸಮಯದಲ್ಲಿ ದೀಪಿಕಾ ಕುಟುಂಬದ ಜೊತಗಿರಲು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂಬ ಮಾಹಿತಿಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿರುತೆರೆಯಲ್ಲಿ ಪ್ರಸಾರವಾಗಲಿರುವ ‘ಹೀರೋ’