ಸಂಭಾವನೆ ತಾರತಮ್ಯದ ಬಗ್ಗೆ ದೀಪಿಕಾ ಪಡುಕೋಣೆ ಅಭಿಪ್ರಾಯವೇನು ಗೊತ್ತಾ..?

Webdunia
ಸೋಮವಾರ, 30 ಏಪ್ರಿಲ್ 2018 (07:23 IST)
ಮುಂಬೈ : ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರು ಇದೀಗ ನಟನಾ ಕ್ಷೇತ್ರದಲ್ಲಿ ನಟ-ನಟಿಯರಿಗೆ ನೀಡುವ ಸಂಭಾವನೆ ತಾರತಮ್ಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಿದ್ದಾರೆ.


ನ್ಯೂಯಾರ್ಕ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೀಪಿಕಾ ಪಡುಕೋಣೆ ಅವರು,’ ನಮ್ಮ ನಟನೆಗೆ ಸೂಕ್ತವೆನಿಸುವ ಸಂಭಾವನೆ ಕೇಳುವುದರಲ್ಲಿ ತಪ್ಪೇನಿಲ್ಲ. ನಮಗೆಲ್ಲರಿಗೂ ನಮ್ಮದೇ ಆದ ಒಂದು ಮಿತಿ ಇರುತ್ತದೆ. ನಮ್ಮ ಶ್ರಮಕ್ಕಿಂತ ಮತ್ತು ಆ ಮಿತಿಗಿಂತಲೂ ಕಡಿಮೆಯೂ ಕೇಳಬಾರದು ಎನ್ನುವುದು ನನ್ನ ಉದ್ದೇಶ. ಈ ಮಿತಿಯ ರೇಖೆ ನಮ್ಮೆಲ್ಲರ ಅರಿವಿನ ಪರಿಧಿಯಲ್ಲಿಯೇ ಇರುತ್ತದೆ. ನಿಮಗೆ ಸಲ್ಲಬೇಕಾದುದನ್ನು ಕೇಳುವುದರಲ್ಲಿ ತಪ್ಪೇನಿಲ್ಲ. ಸುಮಾರು ಕಾಲಗಳಿಂದ ಹೆಣ್ಣು ಗಂಡು ಎನ್ನುವ ಈ ತಾರತಮ್ಯ ನಡೆದುಕೊಂಡು ಬಂದಿದೆ. ಮಹಿಳೆಯರು ಸುಮ್ಮನಿದ್ದರೆ ಅದು ಹಾಗೆಯೇ ಮುಂದುವರಿಯುತ್ತದೆ. ಅಗತ್ಯವಿದ್ದಲ್ಲಿ ಹೋರಾಟ ಮಾಡುವುದರಲ್ಲಿ ತಪ್ಪೇನಿಲ್ಲ. ಅವಕಾಶಗಳು ತಪ್ಪುತ್ತವೆ ಎಂಬ ಆತಂಕವಿರಬಾರದು ಅಷ್ಟೆ. ಆ ಆತಂಕವನ್ನು ಮೀರಲು ಪರಿಣತರಾಗಬೇಕು’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments