Webdunia - Bharat's app for daily news and videos

Install App

ದೊಡ್ಮನೆ ಹುಡ್ಗ ಸಿನಿಮಾದ ಟ್ರೇಲರ್ ರಿಲೀಸ್

Webdunia
ಶುಕ್ರವಾರ, 26 ಆಗಸ್ಟ್ 2016 (10:01 IST)
ಸ್ಯಾಂಡಲ್ ವುಡ್ ಅಂಗಳದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿರುವ ಸಿನಿಮಾ ಡೊದ್ಮನೆ ಹುಡ್ಗ. ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಈ  ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತಾ ಅಭಿಮಾನಿಗಳು ಬಹು ದಿನಗಳಿಂದ ಕಾಯುತ್ತಲೇ ಇದ್ದಾರೆ. ಹೀಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿನಿಮಾ ತಂಡ ನಿನ್ನೆ ಭರ್ಜರಿ ಉಡುಗೊರೆ ನೀಡಿದೆ.

ಬಹು ನಿರೀಕ್ಷಿತ ದೊಡ್ಮನೆ ಹುಡ್ಗ ಸಿನಿಮಾದ ಟ್ರೇಲರ್ ನಿನ್ನೆ ತಾನೇ ರಿಲೀಸ್ ಆಗಿದೆ. ಕೃಷ್ಟ ಜನ್ಮಾಷ್ಟಮಿ ಪ್ರಯುಕ್ತ ಸಿನಿಮಾ ತಂಡ ನಿನ್ನೆ ಸಿನಿಮಾದ ಟ್ರೇಲರ್ ನ್ನು ರಿಲೀಸ್ ಮಾಡಿದೆ. ಪಾರ್ವತಮ್ಮ ರಾಜ್ ಕುಮಾರ್ ಅವರು  ದೊಡ್ಮನೆ ಹುಡ್ಗ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ್ರು.ಆ ಮೂಲಕ ಅಭಿಮಾನಿಗಳಿಗೆ ಜನ್ಮಾಷ್ಟಮಿಯ ಉಡುಗೊರೆ ನೀಡಿದ್ರು.  ಅಲ್ಲದೇ ದೊಡ್ಮನೆ ಹುಡ್ಗ ಸಿನಿಮಾ ಉತ್ತಮ ಯಶಸ್ಸು ಪಡೆಯಲಿ ಅಂತಾ ಸಿನಿಮಾ ತಂಡಕ್ಕೆ ಹಾಗೇ ಮುದ್ದಿನ ಮಗನಿಗೆ ಶುಭ ಹಾರೈಸಿದ್ರು. ಇನ್ನು ಸಪ್ಟಂಬರ್ 23 ರಂದು ದೊಡ್ಮನೆ ಹುಡ್ಗ ಸಿನಿಮಾ ರಿಲೀಸ್ ಆಗಲಿದಯಂತೆ.

ಇನ್ನು ಈ ಸಿನಿಮಾವನ್ನು ದುನಿಯಾ ಸೂರಿ ನಿರ್ದೇಶನ ಮಾಡುತ್ತಿದ್ದಾರೆ.  ರಾಧಿಕಾ ಪಂಡಿತ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ರೆಬೆಲ್ ಸ್ಟಾರ್ ಅಂಬರೀಶ್, ರವಿಶಂಕರ್, ಚಿಕ್ಕಣ್ಣ ಮುಂತಾದವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಸಿನಿಮಾದ ಹಾಡುಗಳು ಈಗಾಗಲೇ ಅಭಿಮಾನಿಗಳಿಗೆ ಭರ್ಜರಿ ಕಿಕ್ ನೀಡುತ್ತಿವೆ. ನಾಲ್ಕು ಹಾಡುಗಳು ಈಗಾಗಲೇ ರಿಲೀಸ್ ಆಗಿವೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments