Select Your Language

Notifications

webdunia
webdunia
webdunia
webdunia

ದೇವರು ಕೊಟ್ಟರೂ, ಪೂಜಾರಿ ಕೊಡದ ಸ್ಥಿತಿ ಪ್ರಧಾನಿ ಮೋದಿ ಸಿನಿಮಾಗೆ!

ಪ್ರಧಾನಿ ಮೋದಿ ಸಿನಿಮಾ
ನವದೆಹಲಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ಇಂದು ಬಿಡುಗಡೆಯಾಗಬೇಕಿದ್ದ ಪ್ರಧಾನಿ ಮೋದಿ ಜೀವನ ಕುರಿತಾದ ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.


ಈ ಸಿನಿಮಾ ಬಿಡುಗಡೆಗೆ ತಡೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಿನಿಮಾ ಬಿಡುಗಡೆಗೆ ಹಸಿರುನಿಶಾನೆ ತೋರಿತ್ತು. ಆದರೆ ಇದೀಗ ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ಚುನಾವಣಾ ಆಯೋಗ ತಡೆ ನೀಡಿದೆ.

ದೇಶದಲ್ಲಿ ಚುನಾವಣೆ ಜಾರಿಯಲ್ಲಿರುವುದರಿಂದ ರಾಜಕಾರಣಿಗಳ ಕುರಿತು ಸಿನಿಮಾ ಬಿಡುಗಡೆ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಸಿನಿಮಾದಲ್ಲಿ ಪ್ರಧಾನಿ ಮೋದಿ ಪಾತ್ರವನ್ನು ವಿವೇಕ್ ಒಬೇರಾಯ್ ನಿಭಾಯಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ವೀಕೆಂಡ್ ವಿತ್ ರಮೇಶ್ ಪ್ರಸಾರ ದಿನಾಂಕ, ಸಮಯ ಬಹಿರಂಗ