Webdunia - Bharat's app for daily news and videos

Install App

ಪ್ರಭಾಸ್ ನಟನೆಯ ದಿ ರಾಜಾ ಸಾಬ್ ಸಿನಿಮಾ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಮತ್ತೇ ನಿರಾಸೆ

Sampriya
ಬುಧವಾರ, 9 ಏಪ್ರಿಲ್ 2025 (16:30 IST)
Photo Courtesy X
ಪ್ರಭಾಸ್ ಅವರ ಬಹುನಿರೀಕ್ಷಿತ ಮಾರುತಿ ನಿರ್ದೇಶನದ 'ದಿ ರಾಜಾ ಸಾಬ್' ಚಿತ್ರ ಬಿಡುಗಡೆ ವಿಳಂಬವಾಗಿದೆ. ಇದರಿಂದ ಭಾರೀ ಕುತೂಹಲದಿಂದ ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಸುಮಾರು ಮೂರು ವರ್ಷಗಳಿಂದ ಚಿತ್ರೀಕರಣ ನಡೆಯುತ್ತಿರುವ ಈ ಹಾರರ್-ರೊಮ್ಯಾಂಟಿಕ್ ಮನರಂಜನೆ ಚಿತ್ರವು ಆರಂಭದಲ್ಲಿ ಏಪ್ರಿಲ್ 10, 2025 ರಂದು ಬಿಡುಗಡೆಯಾಗಬೇಕಿತ್ತು. ಇನ್ನೂ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು  ಬಾಕಿ ಉಳಿದಿರುವುದರಿಂದ, ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಇದುವರೆಗೆ ಸಿನಿಮಾದ ಹೊಸ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ.

ಇತ್ತೀಚೆಗೆ, ನಿರ್ದೇಶಕ ಮಾರುತಿ ಅವರು ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಕಾಳಹಸ್ತಿ ದೇವಾಲಯಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಪ್ರಭಾಸ್ ಅಭಿಮಾನಿಗಳು ಸಿನಿಮಾದ ಬಗ್ಗೆ ಕೇಳಿದ್ದಾರೆ.

ನವೆಂಬರ್ ಅಥವಾ ಮುಂದಿನ ವರ್ಷ ಅಥವಾ ಯಾವಾಗ ಬೇಕಾದರೂ ಬರಲಿದೆ ಎಂದು ಮಾಧ್ಯಮಗಳ ಮೂಲಕ ಅಧಿಕೃತ ಮಾಹಿತಿಯನ್ನು ನೀಡಿ. ಅಭಿಮಾನಿಗಳು ನಿಮಗೆ ತೊಂದರೆ ಕೊಡುವುದಿಲ್ಲ ಎಂದಿದ್ದರು. ಇದೀಗ ಈ ತಿಂಗಳಲ್ಲಿ ಬಿಡುಗಡೆಗೊಳ್ಳಬೇಕಿದ್ದ ಸಿನಿಮಾ ಮತ್ತೇ ಮುಂದೂಡಲಾಗಿದೆ.  
ಅಭಿಮಾನಿಗಳಲ್ಲಿ ತಾಳ್ಮೆಯಿಂದ ಕಾಯುವಂತೆ ನಿರ್ದೇಶಕರು ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments