Webdunia - Bharat's app for daily news and videos

Install App

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮನೆಯ ಬಿಲ್ಡಿಂಗ್ ನಲ್ಲಿ ಬೆಂಕಿ

Krishnaveni K
ಗುರುವಾರ, 7 ಮಾರ್ಚ್ 2024 (10:38 IST)
Photo Courtesy: Twitter
ಮುಂಬೈ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಮನೆಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಪಾಲಿ ಹಿಲ್ಸ್ ನವ್ರೋಜ್ ಹಿಲ್ ಸೊಸೈಟಿ ಅಪಾರ್ಟ್ ಮೆಂಟ್ ನ ಮನೆಯೊಂದರ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜಾಕ್ವೆಲಿನ್ ಇದೇ ಕಟ್ಟಡದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಾರೆ. ಆದರೆ ಅವರ ಮನೆಗೆ ಯಾವುದೇ ಹಾನಿಯಾಗಿಲ್ಲ.

ಈ ಕಟ್ಟಡದಲ್ಲಿ ಒಟ್ಟು 17 ಅಂತಸ್ತುಗಳಿವೆ. ಸದ್ಯದ ವರದಿ ಪ್ರಕಾರ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಅಗ್ನಿ ಶಾಮಕ ದಳ ಸಿಬ್ಬಂದಿ ತಕ್ಷಣವೇ ಆಗಮಿಸಿದ್ದರಿಂದ ಬೆಂಕಿ ನಂದಿಸಲಾಗಿದೆ. ನಿನ್ನೆ ರಾತ್ರಿ 8 ಗಂಟೆಗೆ ಕಟ್ಟಡದ 13 ನೇ ಅಂತಸ್ತಿನಲ್ಲಿ ಘಟನೆ ನಡೆದಿದೆ.

ಕಳೆದ ವರ್ಷವಷ್ಟೇ ಈ ಬಿಲ್ಡಿಂಗ್ ನಲ್ಲಿ ಜಾಕ್ವೆಲಿನ್ ಐದು ಬಿಎಚ್ ಕೆ ಮನೆ ಮಾಡಿದ್ದರು. ಇದರ ವಿಡಿಯೋವನ್ನೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಕೇವಲ ಜಾಕ್ವೆಲಿನ್ ಮಾತ್ರವಲ್ಲ, ಅನೇಕ ಸೆಲೆಬ್ರಿಟಿಗಳು, ಗಣ್ಯರು ಇದೇ ಅಪಾರ್ಟ್ ಮೆಂಟ್ ನಲ್ಲಿ ಮನೆ ಹೊಂದಿದ್ದಾರೆ.

ಇನ್ನು, ಸಿನಿಮಾ ವಿಚಾರಕ್ಕೆ ಬಂದರೆ ಜಾಕ್ವೆಲಿನ್ ಇದೀಗ ಹಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸುತ್ತಿದ್ದಾರೆ. ಅಕ್ರಮ ಹಣವರ್ಗಾವಣೆ ಆರೋಪದಲ್ಲಿ ಬಂಧಿತರಾಗಿರುವ ಸುಕೇಶ್ ಚಂದ್ರಶೇಖರ್ ಜೊತೆಗಿನ ಸಂಬಂಧದಿಂದಾಗಿ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments